ಬೆಳ್ತಂಗಡಿ: ಅತ್ಯಂತ ಪ್ರಾಚೀನವಾದ ತುಳು ಭಾಷೆ ಮತ್ತು ಸಂಸ್ಕೃತಿಯ ಉಳಿವಿಗೆ ಜನಪ್ರತಿನಿಧಿಗಳು ತಕ್ಷಣ ಸ್ಪಂದಿಸಬೇಕಿದೆ,” ಎಂದು ತುಳುನಾಡು ಒಕ್ಕೂಟ ಬೆಳ್ತಂಗಡಿ ಘಟಕದ ಅಧ್ಯಕ್ಷರಾದ ಅರುವ ರಾಜೇಶ್ ಕುಲಾಲ್ ಅವರು ಪ್ರಬಲವಾಗಿ ಆಗ್ರಹಿಸಿದ್ದಾರೆ.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನಪ್ರತಿನಿಧಿಗಳು ಕೇವಲ ಅಧಿಕಾರಕ್ಕಷ್ಟೇ ಸೀಮಿತವಾಗದೆ, ಜನರ ಭಾವನೆ ಮತ್ತು ಆಶೋತ್ತರಗಳಿಗೆ ಧ್ವನಿಯಾಗಬೇಕು. ತುಳುನಾಡಿನ ಜನರ ಹಲವು ದಶಕಗಳ ಬೇಡಿಕೆಯಾದ ತುಳು ಭಾಷೆಯನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯಾಗಿ ಘೋಷಿಸಲು ರಾಜಕಾರಣಿಗಳು ಮತ್ತು ಜನಪ್ರತಿನಿಧಿಗಳು ತೀವ್ರ ಆಸಕ್ತಿ ತೋರಬೇಕಿದೆ.
ಶ್ರೀಮಂತ ಇತಿಹಾಸ ಹೊಂದಿರುವ ತುಳು ಭಾಷೆಯನ್ನು ಯಾವುದೇ ಕಾರಣಕ್ಕೂ ಕಡೆಗಣಿಸಲು ಸಾಧ್ಯವಿಲ್ಲ. ನಮ್ಮ ನೆಲದ ಭಾಷೆ ಮತ್ತು ಸಂಸ್ಕೃತಿಯನ್ನು ರಕ್ಷಿಸುವುದು ಪ್ರತಿಯೊಬ್ಬ ಜನಪ್ರತಿನಿಧಿಯ ಆದ್ಯ ಕರ್ತವ್ಯವಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

