ಮೂಡುಬಿದಿರೆ: ಜುಲೈ 3, ಗುರುವಾರದಿಂದ ನಾಪತ್ತೆಯಾಗಿದ್ದ ಅಲಂಗಾರು ಆಶ್ರಯ ಕಾಲೋನಿ ಸಮೀಪದ ಬಂಗೇರಬೆಟ್ಟು ನಿವಾಸಿ ಕಾರ್ತಿಕ್ ಶೆಟ್ಟಿ (34) ಅವರ ಮೃತದೇಹವು ಶನಿವಾರ ಬೆಳಿಗ್ಗೆ ಮನೆಯ ಸಮೀಪದ ಶೆಡ್ ಹೊರಭಾಗದಲ್ಲಿ ಪತ್ತೆಯಾಗಿದೆ.
ಕಾರ್ತಿಕ್ ಶೆಟ್ಟಿ ಅವರು ಅವಿವಾಹಿತರಾಗಿದ್ದು, ಹಿಟಾಚಿ ಹಾಗೂ ಜೆಸಿಬಿ ಯಂತ್ರಗಳ ಗುತ್ತಿಗೆದಾರರಾಗಿ ಕಾರ್ಯನಿರ್ವಹಿಸುತ್ತಿದ್ದರು. ಅವರು ನಾಪತ್ತೆಯಾಗಿದ್ದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಹುಡುಕಾಟ ನಡೆಸುತ್ತಿದ್ದರು.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪ್ರಾಥಮಿಕ ತನಿಖೆಯಲ್ಲಿ ಹೃದಯಾಘಾತದಿಂದ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದ್ದು, ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕ ಸಾವಿನ ನಿಖರ ಕಾರಣ ತಿಳಿದುಬರಲಿದೆ.

