ಕಾವೇರಿ ತಾಯಿಯ ಪವಿತ್ರ ನೆಲವಾದ ಕೊಡಗು ಜಿಲ್ಲೆಯಾದ್ಯಂತ ಕನ್ನಡ ನಾಡು-ನುಡಿ ಹಾಗೂ ಕನ್ನಡಿಗರ ಸಾರ್ವಭೌಮತ್ವದ ರಕ್ಷಣೆಗಾಗಿ ಮತ್ತು ಸರ್ಕಾರದ ಅಧಿಕೃತ ಕಾಯ್ದೆಯನ್ನು ತಳಮಟ್ಟದಲ್ಲಿ ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಆಗ್ರಹಿಸಿ, ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಮನವಿ ಪತ್ರವನ್ನು ಸಲ್ಲಿಕೆ ಮಾಡಿದೆ
ಕೊಡಗು ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಾಣಿಜ್ಯ ಸಂಸ್ಥೆಗಳು, ಅಂಗಡಿ ಮುಂಗಟ್ಟುಗಳು, ಹೋಟೆಲ್‌ಗಳು, ಪ್ರವಾಸೋದ್ಯಮ ಉದ್ಯಮಗಳು, ರೆಸಾರ್ಟ್‌ಗಳು, ಹೋಂ ಸ್ಟೇಗಳು ಹಾಗೂ ರಸ್ತೆ ಬದಿಯ ಸಾರ್ವಜನಿಕ ಬ್ಯಾನರ್‌ಗಳ ಮೇಲ್ಭಾಗದಲ್ಲಿ ಸರ್ಕಾರದ ಆದೇಶದ ಪ್ರಕಾರ ಶೇಕಡಾ 60 ರಷ್ಟು ಕನ್ನಡ ಭಾಷೆಯನ್ನು ಕಡ್ಡಾಯವಾಗಿ ಜಾರಿಗೊಳಿಸಬೇಕು ಎಂದು ಸಂಘಟನೆ ತೀವ್ರವಾಗಿ ಒತ್ತಾಯಿಸಿದೆ.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು (CEO) ತುರ್ತು ಸಭೆಯಲ್ಲಿದ್ದ ಕಾರಣ, ಸಂಘಟನೆಯ ಪದಾಧಿಕಾರಿಗಳ ಕರೆಗೆ ತಕ್ಷಣವೇ ಸ್ಪಂದಿಸಿ ಸ್ಥಳಕ್ಕೆ ಆಗಮಿಸಿದ ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಅಬ್ದುಲ್ ನಬಿ ಅವರಿಗೆ ಕರವೇ ಸ್ವಾಭಿಮಾನಿ ಬಣದಿಂದ ಮನವಿ ಪತ್ರ ಹಸ್ತಾಂತರಿಸಲಾಯಿತು.

ಮನವಿ ಸಲ್ಲಿಸಿ ಮಾತನಾಡಿದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾದ ಬಿ. ಎ. ಫ್ರಾನ್ಸಿಸ್ ಡಿಸೋಜ, “ಕರ್ನಾಟಕ ಸರ್ಕಾರದ ಆದೇಶದ ಪ್ರಕಾರ ಪ್ರತಿಯೊಂದು ಉದ್ಯಮದ ನಾಮಫಲಕದ ಮೇಲ್ಭಾಗದಲ್ಲಿ ಶೇ. 60 ರಷ್ಟು ಕನ್ನಡ ಇರಲೇಬೇಕು.
ಕೊಡಗಿನಲ್ಲಿ ಕೇವಲ ಹೊರರಾಜ್ಯದ ಪ್ರವಾಸಿಗರನ್ನು ಆಕರ್ಷಿಸಲು ಕನ್ನಡವನ್ನು ಸಂಪೂರ್ಣವಾಗಿ ಕಡೆಗಣಿಸಲಾಗುತ್ತಿದೆ. ಇನ್ಮುಂದೆ ಸರ್ಕಾರದ ನಿಯಮವನ್ನು ಉಲ್ಲಂಘಿಸಿ, ಶೇಕಡಾ 60 ರಷ್ಟು ಕನ್ನಡವಿರದ ನಾಮಫಲಕವನ್ನು ಅಳವಡಿಸದ ಎಲ್ಲಾ ಅಂಗಡಿ ಮುಂಗಟ್ಟುಗಳು ಹಾಗೂ ಜಿಲ್ಲಾದ್ಯಂತ ಇರುವ ಎಲ್ಲಾ ಹೋಂ ಸ್ಟೇಗಳ ವ್ಯಾಪಾರ ಪರವಾನಗಿಯನ್ನು ಯಾವುದೇ ಮುನ್ಸೂಚನೆ ನೀಡದೆ ತಕ್ಷಣವೇ ರದ್ದುಗೊಳಿಸಬೇಕು. ಹೊಸದಾಗಿ ಪರವಾನಗಿ ನೀಡುವಾಗ ಹಾಗೂ ಹಳೆಯ ಪರವಾನಗಿಯನ್ನು ನವೀಕರಿಸುವಾಗ ಪಂಚಾಯಿತಿ ಅಧಿಕಾರಿಗಳು ಖುದ್ದಾಗಿ ಸ್ಥಳ ಪರಿಶೀಲನೆ ನಡೆಸಿ ಕನ್ನಡ ನಾಮಫಲಕ ಇರುವುದನ್ನು ನೋಡಿ ಅನುಮೋದನೆ ನೀಡಬೇಕು.
ಕನ್ನಡ ನಾಮಫಲಕ ಇಲ್ಲದ ಸಂಸ್ಥೆಗಳಿಗೆ ಯಾವುದೇ ಕಾರಣಕ್ಕೂ ಲೈಸೆನ್ಸ್ ನೀಡಬಾರದು” ಎಂದು ಮನವಿ ಮಾಡಿದರು
ಮನವಿ ಪತ್ರದಲ್ಲಿರುವ ಕರವೇ ಸ್ವಾಭಿಮಾನಿ ಬಣದ ಪ್ರಮುಖ ಕಠಿಣ ಬೇಡಿಕೆಗಳು
- ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ (PDO) ಈ ಕುರಿತು ತಕ್ಷಣವೇ ಕಟ್ಟುನಿಟ್ಟಿನ ನಿರ್ದೇಶನ ನೀಡಬೇಕು.
- ತಮ್ಮ ವ್ಯಾಪ್ತಿಯಲ್ಲಿ ಸರ್ಕಾರದ ಆದೇಶ ಉಲ್ಲಂಘನೆಯಾಗುತ್ತಿದ್ದರೆ, ಆಯಾ ಪಂಚಾಯಿತಿಯ ಪಿಡಿಒ (PDO) ಅವರನ್ನೇ ನೇರ ಹೊಣೆಗಾರರನ್ನಾಗಿ ಮಾಡಿ, ಅವರ ವಿರುದ್ಧ ಕಠಿಣ ಶಿಸ್ತು ಕ್ರಮ ಜರುಗಿಸಬೇಕು. ಸಾರ್ವಜನಿಕ ಪ್ರದೇಶಗಳಲ್ಲಿ ಅಂದರೆ ರಸ್ತೆ ಬದಿಗಳಲ್ಲಿ ಮದುವೆ ಸಮಾರಂಭದ್ದು , ಹುಟ್ಟು ಹಬ್ಬದ್ದು ಇನ್ನಿತರ ಯಾವುದೇ ಶುಭಕೋರುವ ಬ್ಯಾನರ್ ಗಳನ್ನು ಅಳವಳಿಸಿದರು ಕನ್ನಡ ಸರ್ಕಾರದ ಆದೇಶ ಅನ್ವಯ 60% ಕನ್ನಡ ಇರದ ಬ್ಯಾನರ್ ಗಳನ್ನು ಇಲ್ಲದಿದ್ದಲ್ಲಿ ಅದನ್ನು ತಕ್ಷಣವೇ ತೆರವುಗೊಳಿಸಬೇಕು ಇನ್ನು ಮುಂದೆ ಪಂಚಾಯಿತಿಗೆ ಸಾರ್ವಜನಿಕರು ಬ್ಯಾನರ್ ಗಳಿಗೆ ಅನುಮತಿ ಕೇಳಲು ಬರುವವರಿಗೆ ಅವರಿಗೆ ತಿಳುವಳಿಕೆ ಪತ್ರ ಕೊಡುವಾಗ ಶೇ 60 ಭಾಗ ಕನ್ನಡ ಇರಬೇಕೆಂದು ಆದೇಶ ಮಾಡಬೇಕೆಂದು ಪಂಚಾಯಿತಿ ಅವರಿಗೆ ತಿಳಿಸಬೇಕೆಂದು ಜಿಲ್ಲಾ ಪಂಚಾಯತಿಯರಿಗೆ ಕರವೇ ಮನವಿ
- ಈ ಮೇಲಿನ ಎಲ್ಲಾ ಕಠಿಣ ಕ್ರಮಗಳನ್ನು ಒಳಗೊಂಡಂತೆ ಜಿಲ್ಲಾ ಪಂಚಾಯತ್ ವತಿಯಿಂದ ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ ಹೊರಡಿಸಲಾಗುವ ತುರ್ತು ಅಧಿಕೃತ ಆದೇಶದ ಒಂದು ಪ್ರತಿಯನ್ನು ಕರವೇ ಸ್ವಾಭಿಮಾನಿ ಬಣದ ಸಂಘಟನೆಗೆ ಆದಷ್ಟು ತಕ್ಷಣವೇ ಕಳುಹಿಸಿಕೊಡಬೇಕು.
ಇದೇ ವೇಳೆ ಜಿಲ್ಲಾ ಉಪಾಧ್ಯಕ್ಷರಾದ ರಾಜಶೇಖರ್ ಗೌಡ ಮಾತನಾಡಿ, “ಕನ್ನಡ ನಾಡಿನಲ್ಲಿ ಕನ್ನಡ ಭಾಷೆಯ ನಿಯಮಗಳಿಗೆ ಕೆಲವು ವ್ಯಾಪಾರಸ್ಥರು ಅಂಗಡಿ ಮುಂಗಟ್ಟಿನ ವರ್ತಕರು ಗೌರವ ನೀಡುತ್ತಿಲ್ಲ.
ಜಿಲ್ಲಾ ಪಂಚಾಯಿತಿಯು ತಕ್ಷಣವೇ ಎಲ್ಲಾ ಪಂಚಾಯ್ತಿಗಳಿಗೂ ಕನ್ನಡ ಶೇ. 60 ಇರಬೇಕೆಂದು ಆದೇಶ ನೀಡಬೇಕು” ಎಂದು ಆಗ್ರಹಿಸಿದರು.
ಕರವೇ ಹೋರಾಟಕ್ಕೆ ತಕ್ಷಣವೇ ಸ್ಪಂದಿಸಿದ ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಅಬ್ದುಲ್ ನಬಿ ಅವರು, “ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ ಶೀಘ್ರದಲ್ಲೇ ಶೇ.60 ಕನ್ನಡ ಕಡ್ಡಾಯಗೊಳಿಸುವ ಬಗ್ಗೆ ಅಧಿಕೃತ ಸುತ್ತೋಲೆಯನ್ನು ಬೇಗನೆ ಆದೇಶ ಮಾಡಿ ಕಳಿಸಿಕೊಡಲಾಗುವುದು. ಹಾಗೂ ಆ ಪ್ರತಿಯನ್ನು ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ಪದಾಧಿಕಾರಿಗಳಿಗೂ ತಲುಪಿಸಲಾಗುವುದು, ಇದನ್ನು ಶೀಘ್ರವಾಗಿ ಮಾಡುತ್ತೇವೆ” ಎಂದು ಭರವಸೆ ನೀಡಿದರು.
ಈ ಮನವಿ ಸಲ್ಲಿಕೆ ಸಂದರ್ಭದಲ್ಲಿ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾದ ಫ್ರಾನ್ಸಿಸ್ ಡಿಸೋಜ ಮತ್ತು ಕರವೇ ಸ್ವಾಭಿಮಾನಿ ಬಣದ ಜಿಲ್ಲಾ ಉಪಾಧ್ಯಕ್ಷರಾದ ರಾಜಶೇಖರ ಗೌಡ ಹಾಗೂ ಜಿಲ್ಲಾ ಮಹಿಳಾ ಘಟಕದ ಜಿಲ್ಲಾಧ್ಯಕ್ಷರಾದ ಜಯಶ್ರೀ ಮುರುಗೇಶ್ ಮತ್ತು ಕುಶಾಲನಗರ ತಾಲೂಕು ಅಧ್ಯಕ್ಷರಾದ ಶಿವು ಮತ್ತು ಕುಶಾಲನಗರ ತಾಲ್ಲೂಕು ಉಪಾಧ್ಯಕ್ಷರಾದ ನಾಸಿರ್ ಮತ್ತು ಕುಶಾಲನಗರ ತಾಲ್ಲೂಕು ಪ್ರಧಾನ ಕಾರ್ಯದರ್ಶಿಗಳಾದ ರವಿಕಿರಣ್ ಮತ್ತು ಕುಶಾಲನಗರ ತಾಲೂಕು ಕಾರ್ಮಿಕ ಘಟಕದ ಉಪಾಧ್ಯಕ್ಷರದ ಮಣಿಕಂಠ ಮತ್ತು ಮಡಿಕೇರಿ ತಾಲೂಕು ಮಹಿಳಾ ಘಟಕದ ಅಧ್ಯಕ್ಷರಾದ ನಂದಿನಿ ಮತ್ತು ಸುಂಟಿಕೊಪ್ಪ ಹೋಬಳಿ ಮಹಿಳಾ ಘಟಕದ ಅಧ್ಯಕ್ಷರಾದ ಭವ್ಯ ಮತ್ತು ಪದಾಧಿಕಾರಿಗಳಾದ ರವೀಂದ್ರ ಮತ್ತು ವಿಲ್ಸನ್ ಮತ್ತು ನಂಜಪ್ಪ ಮತ್ತು ರಮೇಶ್ ಮತ್ತು ಬಾಲಕೃಷ್ಣ ಸಂದರ್ಭದಲ್ಲಿ ಉಪಸ್ಥಿತರಿದ್ದರು

