ಮಂಗಳೂರು : ಸಮಾಜ ಸೇವೆ ಹಾಗೂ ಧಾರ್ಮಿಕ ಕ್ಷೇತ್ರದಲ್ಲಿ ಸಲ್ಲಿಸಿರುವ ವಿಶಿಷ್ಟ ಸೇವೆಯನ್ನು ಗುರುತಿಸಿ ದಾವಣಗೆರೆಯ ಚಂಡಿಕಾಶ್ರಮದ ಅಘೋರಿ ಚಿದಂಬರ ಯೋಗಿ ಅವರನ್ನು ಕನ್ನಡ ಭವನದ ಪ್ರತಿಷ್ಠಿತ **’ಧಾರ್ಮಿಕ ಸಮಾಜ ಸೇವಾ ರತ್ನ ಪ್ರಶಸ್ತಿ-2026’**ಗೆ ಆಯ್ಕೆ ಮಾಡಲಾಗಿದೆ.
ಜುಲೈ 26ರಂದು ಕನ್ನಡ ಭವನದ ರಜತ ಸಂಭ್ರಮ ಸಮಾರೋಪ ಕಾರ್ಯಕ್ರಮ ಹಾಗೂ ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನದ ಅಂಗವಾಗಿ ನಡೆಯುವ ಸಮಾರಂಭದಲ್ಲಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು ಎಂದು ಸಮ್ಮೇಳನ ಸಮಿತಿ ಅಧ್ಯಕ್ಷ ಡಾ. ಕೆ.ಎನ್. ವೆಂಕಟ್ರಮಣ ಹೊಳ್ಳ ಹಾಗೂ ಕನ್ನಡ ಭವನದ ಸ್ಥಾಪಕ ಅಧ್ಯಕ್ಷ ಡಾ. ಕೆ. ವಾಮನ್ ರಾವ್ ಬೇಕಲ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

