ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಭಾರತೀಯ ಜನ ಸಂಘದ ಸಂಸ್ಥಾಪಕರಾದ ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಇವರ 125 ನೇ ಜನ್ಮ ದಿನಾಚರಣೆಯನ್ನು ಜುಲೈ 06 ರಂದು ಪಕ್ಷದ ಕಚೇರಿಯಲ್ಲಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಮಂಡಲ ಪ್ರಧಾನ ಕಾರ್ಯದರ್ಶಿ ಜಯಾನಂದ ಗೌಡ ಪ್ರಜ್ವಲ್, ಮಂಡಲ ಕಾರ್ಯದರ್ಶಿಗಳಾದ ಜಯಾನಂದ ಕಲ್ಲಾಪು,ಪ್ರಭಾಕರ ಸವಣಾಲು , ನಗರ ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ಶರತ್ ಶೆಟ್ಟಿ, ಮಂಡಲ ಯುವಮೋರ್ಚಾ ಉಪಾಧ್ಯಕ್ಷರಾದ ಗಣೇಶ್. ಆರ್. ಲಾಯಿಲ, ಪ್ರಮುಖರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

