ಹೆಬ್ರಿ : ಇನ್‌ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ (ICAI) ನಡೆಸಿದ ಮೇ–2026ರ ಸಿಎ ಫೌಂಡೇಷನ್ ಪರೀಕ್ಷೆಯಲ್ಲಿ ಹೆಬ್ರಿಯ ಅಮೃತಭಾರತಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿ ಕಾಲೇಜಿಗೆ ಕೀರ್ತಿ ತಂದಿದ್ದಾರೆ.
ಕಾಲೇಜಿನ ವಿದ್ಯಾರ್ಥಿನಿ ಕು. ಜಾನ್ಹವಿ ಪ್ರಭು 400 ಅಂಕಗಳಿಗೆ 223 ಅಂಕ, ವಿದ್ಯಾರ್ಥಿ ಪ್ರವೀಣ್ ಶೆಣೈ 221 ಅಂಕ ಹಾಗೂ ಶ್ರೇಷ್ಠ ಶೆಟ್ಟಿ 220 ಅಂಕಗಳನ್ನು ಗಳಿಸಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ಇದರೊಂದಿಗೆ ಅವರು ಸಿಎ ಇಂಟರ್‌ಮೀಡಿಯೆಟ್ ಹಂತಕ್ಕೆ ಅರ್ಹತೆ ಪಡೆದಿದ್ದಾರೆ.
ವಿದ್ಯಾರ್ಥಿಗಳ ಈ ಗಮನಾರ್ಹ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಉಪನ್ಯಾಸಕ ವರ್ಗ ಹರ್ಷ ವ್ಯಕ್ತಪಡಿಸಿದ್ದು, ವಿದ್ಯಾರ್ಥಿಗಳಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿ, ಮುಂದಿನ ಸಿಎ ವ್ಯಾಸಂಗದಲ್ಲಿಯೂ ಇದೇ ರೀತಿಯ ಯಶಸ್ಸು ಸಾಧಿಸಲಿ ಎಂದು ಶುಭ ಹಾರೈಸಿದ್ದಾರೆ.

