ಮೈಸೂರು : ದಿನಾಂಕ 11-07-26 ರಂದು ಶನಿವಾರ ಕನ್ನಡ ಸಾಹಿತ್ಯ ಪರಿಷತ್ತು ತಾಲೂಕು ಘಟಕ ಚಿಂತಾಮಣಿ ಇವರ ವತಿಯಿಂದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಕೇಂದ್ರದಲ್ಲಿ ನಡೆಯುತ್ತಿರುವ ರಾಜ್ಯಮಟ್ಟದ ಕವಿಗೋಷ್ಠಿಯಲ್ಲಿ ಭಾಗವಹಿಸಿ ತಮ್ಮ ಸ್ವರಚಿತ ಕವನ ವಾಚಿಸಲು ಮೈಸೂರಿನ ಕವಿ ಸಾಹಿತಿಗಳಾದ ಸು ಶಿ ಶಾಂತಕುಮಾರ್ ಹರವೆ ಇವರು ಆಯ್ಕೆಯಾಗಿದ್ದಾರೆ ಎಂದು ಕನ್ನಡ ಸಾಹಿತ್ಯ ಪರಿಷತ್ತು ಚಿಂತಾಮಣಿ ತಾಲೂಕು ಘಟಕದ ಅಧ್ಯಕ್ಷರಾದ ಶ್ರೀನಿವಾಸನ್ ಎನ್ ವಿ, ರವರು ತಮ್ಮ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

