ದಾಸ್ ಪ್ರಮೋಷನ್ಸ್ ನವೀಕೃತ ಕೇಂದ್ರ ಕಚೇರಿ ಉದ್ಘಾಟನೆ

0
7

ಮಂಗಳೂರು : ನಗರದ ಕಂಕನಾಡಿಯ ಎಂಪೋರಿಯಂ ಕಾಂಪ್ಲೆಕ್ಸ್‌ನಲ್ಲಿ ದಾಸ್ ಪ್ರಮೋಷನ್ಸ್, ಮಂಗಳೂರು ಸಂಸ್ಥೆಯ ನವೀಕೃತ ಕೇಂದ್ರ ಕಚೇರಿಯ ಉದ್ಘಾಟನಾ ಸಮಾರಂಭವು ಸಂಭ್ರಮದಿಂದ ನಡೆಯಿತು.

ಕರ್ನಾಟಕ ರಾಜ್ಯ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಅವರು ನೂತನ ಕಚೇರಿಯನ್ನು ಉದ್ಘಾಟಿಸಿ, ಸಂಸ್ಥೆಯ ಬೆಳವಣಿಗೆ ಹಾಗೂ ಸಮಾಜಮುಖಿ ಕಾರ್ಯಗಳನ್ನು ಮುಕ್ತಕಂಠದಿಂದ ಶ್ಲಾಘಿಸಿ ಶುಭ ಹಾರೈಸಿದರು.

ಶ್ರೀ ಕ್ಷೇತ್ರ ಕಟೀಲು ಮುಖ್ಯ ಅರ್ಚಕರಾದ ಕಮಲಾದೇವಿ ಪ್ರಸಾದ್ ಅಸ್ರಣ್ಣ ಅವರು ದೀಪ ಬೆಳಗಿಸಿ ಆಶೀರ್ವಚನ ನೀಡಿದರು. ದೈಜಿ ವರ್ಲ್ಡ್ ಮೀಡಿಯಾ ಸಂಸ್ಥಾಪಕರಾದ ವಾಲ್ಟರ್ ನಂದಳಿಕೆ ಅವರು ನಾಮಫಲಕ ಅನಾವರಣಗೊಳಿಸಿ, ದಾಸ್ ಪ್ರಮೋಷನ್ಸ್ ಸಂಸ್ಥೆಯ ಸಾಧನೆ ಹಾಗೂ ಬೆಳವಣಿಗೆಯನ್ನು ಶ್ಲಾಘಿಸಿದರು.

ಈ ಸಂದರ್ಭದಲ್ಲಿ ಖ್ಯಾತ ಅಂತರಾಷ್ಟ್ರೀಯ ಕಬ್ಬಡಿ ಆಟಗಾರ್ತಿ ಕುಮಾರಿ ಧನಲಕ್ಷ್ಮಿ ಅವರನ್ನು ವಿಶೇಷವಾಗಿ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಂಗಳೂರು ಶಾಸಕ ವೇದವ್ಯಾಸ ಕಾಮತ್, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ಪಣೋಲಿ ಬೈಲು ಭಂಡಾರ ಮನೆ ರಮೇಶ್, ಧಾರ್ಮಿಕ ಪರಿಷತ್ ಸದಸ್ಯ ದೇವಪ್ಪ ಪಂಜಿಕಲ್ಲು, ಸೌಂದರ್ಯ ರಮೇಶ್, ಸೆನೆಟ್ ಸದಸ್ಯ ಸುರೇಶ್ ನಾವೂರ್, ಬಿಜೆಪಿ ಜಿಲ್ಲಾ ಮುಖಂಡ ಧನಲಕ್ಷ್ಮಿ ಗಟ್ಟಿ, ಮಹಾಬಲ ಕೊಟ್ಟಾರಿ, ನಾಗೇಂದ್ರ ಕುಮಾರ್, ಕುದ್ರೋಳಿ ಗಣೇಶ್, ಡಾ. ಅಣ್ಣಯ್ಯ ಕುಲಾಲ್, ದಯಾನಂದ್ ಅಡ್ಯಾರ್, ಜಯರಾಜ್ ಪ್ರಕಾಶ್ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಿ ಶುಭಾಶಯ ಕೋರಿದರು.

ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳ ಗಣ್ಯರು, ಉದ್ಯಮಿಗಳು, ಸಮಾಜಸೇವಕರು, ಸ್ನೇಹಿತರು ಹಾಗೂ ಹಿತೈಷಿಗಳು ಉಪಸ್ಥಿತರಿದ್ದು, ದಾಸ್ ಪ್ರಮೋಷನ್ಸ್ ಸಂಸ್ಥೆಯ ಮುಂದಿನ ಬೆಳವಣಿಗೆಗೆ ಶುಭ ಹಾರೈಸಿದರು.

LEAVE A REPLY

Please enter your comment!
Please enter your name here