ತುಳುವ ಮಹಾಸಭೆ ಇಂಟರ್‌ನ್ಯಾಷನಲ್‌ನ ಸುಳ್ಯ ವಲಯ ಸಂಚಾಲಕರಾಗಿ ಮಿಲನ್ ಗೌಡ ಬಾಳಿಕಳ ಆಯ್ಕೆ

0
12

ಸುಳ್ಯ: ತುಳುವ ಮಹಾಸಭೆ ಇಂಟರ್‌ನ್ಯಾಷನಲ್‌ನ ಸುಳ್ಯ ವಲಯ ಸಂಚಾಲಕರನ್ನಾಗಿ ಮಿಲನ್ ಗೌಡ ಬಾಳಿಕಳ ಅವರನ್ನು ಆಯ್ಕೆ ಮಾಡಲಾಗಿದೆ.

ಸುಳ್ಯ ತಾಲೂಕಿನ ಪದವೀಧರ ಯುವಕರಾಗಿರುವ ಇವರು ಸಮಾಜಸೇವೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದು, ವಿವಿಧ ಸಾಮಾಜಿಕ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಭಾಗವಹಿಸುತ್ತಿದ್ದಾರೆ. ತುಳುವ ಭಾಷೆ, ಸಂಸ್ಕೃತಿ ಹಾಗೂ ಪರಂಪರೆಯ ಉಳಿವಿಗಾಗಿ ನಿರಂತರವಾಗಿ ಶ್ರಮಿಸುತ್ತಿರುವ ಇವರನ್ನು ಸಂಘಟನೆಯ ರಾಜ್ಯಾಧ್ಯಕ್ಷರು ಹಾಗೂ ಪದಾಧಿಕಾರಿಗಳು ಈ ಜವಾಬ್ದಾರಿಗೆ ಆಯ್ಕೆ ಮಾಡಿದ್ದಾರೆ.

ಇವರ ಸಂಘಟನಾ ಸಾಮರ್ಥ್ಯ, ಸಮಾಜಸೇವೆಯಲ್ಲಿನ ಅನುಭವ ಮತ್ತು ತುಳುವ ಭಾಷೆಯ ಮೇಲಿನ ಬದ್ಧತೆಯನ್ನು ಪರಿಗಣಿಸಿ ಈ ನೇಮಕ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ತುಳುವ ಮಹಾಸಭೆ ಇಂಟರ್‌ನ್ಯಾಷನಲ್‌ನ ಚಟುವಟಿಕೆಗಳನ್ನು ಸುಳ್ಯ ತಾಲೂಕಿನಲ್ಲಿ ಇನ್ನಷ್ಟು ಬಲಪಡಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here