ಡಾ. ಎಸ್. ಬಾಲಾಜಿಗೆ ‘ನಾಡೋಜ ಡಾ. ಕಯ್ಯಾರ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ – 2026’ ಗೌರವ

0
11

ಕಾಸರಗೋಡು : ಕನ್ನಡ ಜಾನಪದ ಕಲೆ, ಸಂಸ್ಕೃತಿ ಮತ್ತು ಪರಂಪರೆಯ ಸಂರಕ್ಷಣೆಗೆ ವಿಶಿಷ್ಟ ಸೇವೆ ಸಲ್ಲಿಸಿರುವ ಕನ್ನಡ ಜಾನಪದ ಪರಿಷತ್‌ನ ಸ್ಥಾಪಕರಾದ ಡಾ. ಎಸ್. ಬಾಲಾಜಿ ಅವರು **‘ನಾಡೋಜ ಡಾ. ಕಯ್ಯಾರ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ – 2026’**ಗೆ ಆಯ್ಕೆಯಾಗಿದ್ದಾರೆ.

ಕೇರಳ ರಾಜ್ಯದ ಕಾಸರಗೋಡಿನ ಕನ್ನಡ ಭವನ ನೀಡುವ ಪ್ರತಿಷ್ಠಿತ ರಾಷ್ಟ್ರೀಯ ಪ್ರಶಸ್ತಿಗೆ ಡಾ. ಎಸ್. ಬಾಲಾಜಿ ಅವರನ್ನು ಆಯ್ಕೆ ಮಾಡಲಾಗಿದೆ. ಜುಲೈ 26ರಂದು ಕನ್ನಡ ಭವನದ ರಜತ ಸಂಭ್ರಮ ಸಮಾರೋಪ ಕಾರ್ಯಕ್ರಮದ ಅಂಗವಾಗಿ ನಡೆಯಲಿರುವ ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನದಲ್ಲಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು.

ಈ ಕುರಿತು ಸಮ್ಮೇಳನ ಸಮಿತಿ ಅಧ್ಯಕ್ಷರಾದ ಡಾ. ಕೆ. ಎನ್. ವೆಂಕಟ್ರಮಣ ಹೊಳ್ಳ ಹಾಗೂ ಕನ್ನಡ ಭವನದ ಸ್ಥಾಪಕ ಅಧ್ಯಕ್ಷರಾದ ಡಾ. ಕೆ. ವಾಮನ್ ರಾವ್ ಬೇಕಲ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕನ್ನಡ ಜಾನಪದ ಕಲೆ, ಸಾಹಿತ್ಯ, ಸಂಸ್ಕೃತಿ ಹಾಗೂ ಸಂಘಟನಾ ಕ್ಷೇತ್ರದಲ್ಲಿ ಡಾ. ಎಸ್. ಬಾಲಾಜಿ ಅವರು ಸಲ್ಲಿಸಿರುವ ಅಮೂಲ್ಯ ಸೇವೆಯನ್ನು ಪರಿಗಣಿಸಿ ಈ ಪ್ರತಿಷ್ಠಿತ ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ವಿವರಿಸಲಾಗಿದೆ.

LEAVE A REPLY

Please enter your comment!
Please enter your name here