ಅನಂತಾಡಿಯಲ್ಲಿ ಡಿಜಿಪೇ ಸೇವೆಗೆ ಚಾಲನೆ : ಗ್ರಾಮೀಣ ಜನರಿಗೆ ಡಿಜಿಟಲ್ ಸೇವೆಗಳ ವಿಸ್ತರಣೆ

0
12

ಮಾಣಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ಬಿ.ಸಿ. ಟ್ರಸ್ಟ್) ಮಾಣಿ ವಲಯದ ಅನಂತಾಡಿ ಹಣ ಸಂಗ್ರಹಣಾ ಕೇಂದ್ರದಲ್ಲಿ ಡಿಜಿಪೇ (DigiPay) ಸೇವೆಗೆ ಚಾಲನೆ ನೀಡಲಾಯಿತು.

ಬಂಟ್ವಾಳ ತಾಲೂಕು ಜನಜಾಗೃತಿ ವೇದಿಕೆ ಸದಸ್ಯೆ ಜಯಂತಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಗ್ರಾಮೀಣ ಪ್ರದೇಶದ ಜನರಿಗೆ ಸುಲಭವಾಗಿ ಡಿಜಿಟಲ್ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ಡಿಜಿಟಲ್ ಸೇವಾ ಕೇಂದ್ರಗಳನ್ನು ಆರಂಭಿಸಲಾಗಿದೆ. ಈ ಮೂಲಕ ವಿವಿಧ ಸರ್ಕಾರಿ ಹಾಗೂ ಬ್ಯಾಂಕಿಂಗ್ ಸೇವೆಗಳು ಗ್ರಾಮೀಣ ಜನರಿಗೆ ಸುಲಭವಾಗಿ ಲಭ್ಯವಾಗಲಿದ್ದು, ಪ್ರತಿಯೊಬ್ಬರೂ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕರೆ ನೀಡಿದರು.

ಮಾಣಿ ವಲಯದ ಮೇಲ್ವಿಚಾರಕಿ ಆಶಾ ಪಾರ್ವತಿ ಅವರು ಡಿಜಿಪೇ ಸೇವೆಯ ಕುರಿತು ಮಾಹಿತಿ ನೀಡಿ, ಡಿಜಿಟಲ್ ವ್ಯವಹಾರಗಳನ್ನು ಸುರಕ್ಷಿತ ಹಾಗೂ ಸುಲಭವಾಗಿ ನಡೆಸಲು ಈ ಸೇವೆ ಸಹಕಾರಿಯಾಗಲಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಒಕ್ಕೂಟದ ಅಧ್ಯಕ್ಷೆ ಪ್ರೇಮ, ಗೀತಾ, ಸೇವಾ ಪ್ರತಿನಿಧಿ ಪುಷ್ಪಲತಾ, ವಿ.ಎಲ್.ಇ. (VLE) ಧನಲಕ್ಷ್ಮಿ, ಸುವಿಧಾ ಸಹಾಯಕರು ಹಾಗೂ ಸಂಘದ ಸದಸ್ಯರು ಉಪಸ್ಥಿತರಿದ್ದು, ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

LEAVE A REPLY

Please enter your comment!
Please enter your name here