ದಾವಣಗೆರೆ : ಚಲನಚಿತ್ರ ಅಭಿಮಾನಿಗಳ ಕ್ರಿಯಾತ್ಮಕ ಸಂಸ್ಥೆ “ಸಿನಿಮಾ ಸಿರಿ” ಸಂಸ್ಥೆಯು ಜುಲೈ 11 ರಂದು ಶನಿವಾರ ಸಂಜೆ 6 ಗಂಟೆಗೆ ನಗರದ ಜಯದೇವ ವೃತ್ತದಲ್ಲಿರುವ ಶಿವಯೋಗಿ ಮಂದಿರದ ಸಭಾಂಗಣ ದಲ್ಲಿ ಸರ್ವ ಸದಸ್ಯರ ಮಹಾಸಭೆ ಕರೆಯಲಾಗಿದೆ ಎಂದು ಸಂಸ್ಥೆಯ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್ ಶೆಣೈ ತಿಳಿಸಿದ್ದಾರೆ.
ಸಿನಿಮಾ ಸಿರಿ ಸಂಸ್ಥೆಯ ಅಧ್ಯಕ್ಷ ರಾದ ಅಂದನೂರು ಮುಪ್ಪಣ್ಣನವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಮಹಾಸಭೆಯಲ್ಲಿ 2026-28ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆಯಾಗಲಿದೆ ಎಂದು ಸಂಸ್ಥೆ ಪ್ರಧಾನ ಕಾರ್ಯದರ್ಶಿ ಆರ್.ಟಿ. ಮೃತ್ಯುಂಯರವರು ಪ್ರಕಟಿಸಿದ್ದಾರೆ.
ಮಹತ್ವಪೂರ್ಣ ಈ ಮಹಾಸಭೆಗೆ ಸಿನಿಮಾ ಸಿರಿಯ ಸರ್ವ ಸದಸ್ಯರು ಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಸಭೆಯನ್ನು ಯಶಸ್ವಿಗೊಳಿಸಬೇಕಾಗಿ ಸಮಿತಿ ಸದಸ್ಯರು ವಿನಂತಿಸಿದ್ದಾರೆ.

