ಜುಲೈ 12ರಂದು ಜಪ್ಪಿನಮೊಗರು ಶ್ರೀ ಗಣೇಶೋತ್ಸವ ಸಮಿತಿಯ ವಾರ್ಷಿಕ ಮಹಾಸಭೆ

0
20

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ, ಜಪ್ಪಿನಮೊಗರು, ಮಂಗಳೂರು ವತಿಯಿಂದ ಆಯೋಜಿಸಲಾಗುತ್ತಿರುವ 18ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಪೂರ್ವಭಾವಿ ಸಭೆ ಹಾಗೂ ವಾರ್ಷಿಕ ಮಹಾಸಭೆಯು 2026ರ ಜುಲೈ 12ರಂದು (ಆದಿತ್ಯವಾರ) ಬೆಳಿಗ್ಗೆ 10.00 ಗಂಟೆಗೆ ಜಪ್ಪಿನಮೊಗರು ಕಂರ್ಬೆಟ್ಟು ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ನಡೆಯಲಿದೆ.

ಸಭೆಯಲ್ಲಿ 18ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಕಾರ್ಯಕ್ರಮಗಳ ರೂಪುರೇಷೆ, ನಿಧಿ ಸಂಗ್ರಹಣೆ, ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆ, ಗ್ರಾಮೀಣ ಕ್ರೀಡೋತ್ಸವದ ಯೋಜನೆ ಹಾಗೂ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಕುರಿತು ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು.

ಸಭೆಯು ನಿಗದಿತ ಸಮಯಕ್ಕೆ ಆರಂಭವಾಗಲಿರುವುದರಿಂದ ಸಮಿತಿಯ ಎಲ್ಲಾ ಸದಸ್ಯರು ಕಡ್ಡಾಯವಾಗಿ ಉಪಸ್ಥಿತರಾಗಿ ತಮ್ಮ ಅಮೂಲ್ಯ ಸಲಹೆ-ಸೂಚನೆಗಳನ್ನು ನೀಡಿ ಸಭೆಯನ್ನು ಯಶಸ್ವಿಗೊಳಿಸಬೇಕೆಂದು ಸಮಿತಿಯ ಅಧ್ಯಕ್ಷರು ಹಾಗೂ ಮಾಜಿ ಕಾರ್ಪೊರೇಟರ್ ಜೆ. ನಾಗೇಂದ್ರ ಕುಮಾರ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

LEAVE A REPLY

Please enter your comment!
Please enter your name here