ಸುರತ್ಕಲ್ ಪೊಲೀಸರ ದಾಳಿ : ಮುಕ್ಕದಲ್ಲಿ ಬಾಂಗ್ಲಾ ಮೂಲದವರ ಬಂಧನ

0
53

ಸುರತ್ಕಲ್ : ಸುರತ್ಕಲ್ ಸಮೀಪದ ಮುಕ್ಕ ಪ್ರದೇಶದಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ಬಾಂಗ್ಲಾದೇಶ ಮೂಲದವರಾಗಿರುವ ಶಂಕೆಯ ಮೇರೆಗೆ ಸುಮಾರು ಏಳು ರಿಂದ ಎಂಟು ಮಂದಿಯನ್ನು ಸುರತ್ಕಲ್ ಪೊಲೀಸರು ಬಂಧಿಸಿರುವ ಘಟನೆ ಬೆಳಕಿಗೆ ಬಂದಿದೆ.

ಮುಕ್ಕದಲ್ಲಿ ವಿವಿಧ ಕಾಮಗಾರಿ ಸ್ಥಳಗಳಲ್ಲಿ ಉತ್ತರ ಪ್ರದೇಶ ಮೂಲದ ಕಾರ್ಮಿಕರೊಂದಿಗೆ ಕೆಲ ಬಾಂಗ್ಲಾದೇಶ ಮೂಲದ ವ್ಯಕ್ತಿಗಳು ನಕಲಿ ಆಧಾರ್ ಕಾರ್ಡ್‌ಗಳನ್ನು ಬಳಸಿ ಅಕ್ರಮವಾಗಿ ವಾಸಿಸುತ್ತಿದ್ದಾರೆ ಎಂಬ ಖಚಿತ ಮಾಹಿತಿ ಪೊಲೀಸರಿಗೆ ದೊರೆತಿತ್ತು. ಈ ಮಾಹಿತಿ ಆಧರಿಸಿ ಸುರತ್ಕಲ್ ಪೊಲೀಸರು ಕಾರ್ಯಾಚರಣೆ ನಡೆಸಿ ಶಂಕಿತರನ್ನು ವಶಕ್ಕೆ ಪಡೆದಿದ್ದಾರೆ.

ಬಂಧಿತರಿಂದ ದಾಖಲೆಗಳನ್ನು ಪರಿಶೀಲಿಸಲಾಗುತ್ತಿದ್ದು, ಅವರ ಗುರುತು ಮತ್ತು ನಾಗರಿಕತ್ವದ ಬಗ್ಗೆ ತನಿಖೆ ಮುಂದುವರಿದಿದೆ. ನಕಲಿ ಗುರುತಿನ ದಾಖಲೆಗಳನ್ನು ಬಳಸಿ ಭಾರತದಲ್ಲಿ ಅಕ್ರಮವಾಗಿ ನೆಲೆಸಿರುವ ಬಗ್ಗೆ ಶಂಕೆ ವ್ಯಕ್ತವಾಗಿದ್ದು, ಸಂಬಂಧಿತ ಅಧಿಕಾರಿಗಳ ಸಹಯೋಗದಲ್ಲಿ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಬಂಧಿತರನ್ನು ಮುಂದಿನ ಕಾನೂನು ಕ್ರಮಕ್ಕಾಗಿ ಬೆಂಗಳೂರಿನ ಸಂಬಂಧಿತ ತನಿಖಾ ಅಧಿಕಾರಿಗಳ ವಶಕ್ಕೆ ಒಪ್ಪಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ತಿಳಿದುಬಂದಿದೆ.

ಬಂಧಿತರು ಬಾಂಗ್ಲಾದೇಶದ ಪ್ರಜೆಗಳೇ ಎಂಬುದು ತನಿಖೆ ಪೂರ್ಣಗೊಂಡ ಬಳಿಕ ಅಧಿಕೃತವಾಗಿ ದೃಢಪಡಿಸಬೇಕಾಗಿದೆ. ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.

LEAVE A REPLY

Please enter your comment!
Please enter your name here