ಮಣಿಪಾಲದ ಖಾಸಗಿ ಶಿಕ್ಷಣ ಸಂಸ್ಥೆಯ ಶಾಲಾ ಬಸ್ ಅಪಘಾತಕ್ಕೀಡಾಗಿ ವಿದ್ಯಾರ್ಥಿಗಳು ಗಾಯಗೊಂಡ ಬಗ್ಗೆ ಮಾಹಿತಿ ತಿಳಿದ ಕೂಡಲೇ ಉಡುಪಿ ಶಾಸಕರಾದ ಯಶ್ ಪಾಲ್ ಸುವರ್ಣ ಮಣಿಪಾಲ ಕೆ. ಎಂ. ಸಿ ಆಸ್ಪತ್ರೆಗೆ ಭೇಟಿ ನೀಡಿ ಚಿಕಿತ್ಸೆ ಪಡೆಯುತ್ತಿರುವ ವಿದ್ಯಾರ್ಥಿಗಳ ಆರೋಗ್ಯ ಸ್ಥಿತಿಯ ಬಗ್ಗೆ ವೈದ್ಯರು ಹಾಗೂ ಪೋಷಕರೊಂದಿಗೆ ಮಾಹಿತಿ ಪಡೆದರು.
ಒಂದು ತಿಂಗಳ ಅವಧಿಯಲ್ಲಿ ಉಡುಪಿ ನಗರಭಾಗದಲ್ಲಿ 3 ಶಾಲಾ ಬಸ್ ಅಪಘಾತ ಪ್ರಕರಣ ವರದಿಯಾಗಿದ್ದು, ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಸಾರಿಗೆ ಇಲಾಖೆ, ಪೊಲೀಸ್ ಇಲಾಖೆ, ಶಿಕ್ಷಣ ಇಲಾಖೆ, ಶಿಕ್ಷಣ ಸಂಸ್ಥೆಗಳ ಪ್ರಮುಖರು ನಿಯಮಾವಳಿಗಳನ್ನು ಪಾಲನೆಗೆ ವಿಶೇಷ ಆದ್ಯತೆ ನೀಡುವಂತೆ ತಿಳಿಸಿದರು.
ಈ ಸಂದರ್ಭದಲ್ಲಿ ಉಡುಪಿ ನಗರ ಬಿಜೆಪಿ ಅಧ್ಯಕ್ಷರಾದ ದಿನೇಶ್ ಅಮೀನ್, ಕಾರ್ಯದರ್ಶಿ ಗುರುರಾಜ್ ಭಂಡಾರಿ, ಯುವ ಮೋರ್ಚಾದ ಅಧ್ಯಕ್ಷರಾದ ಶ್ರೀವತ್ಸ, ಪದಾಧಿಕಾರಿ ನಿತಿನ್ ಪೈ ಮೊದಲಾದವರು ಉಪಸ್ಥಿತರಿದ್ದರು.

