ಗದಗದ ಡಾ. ಶಾಂತಕುಮಾರ ಬಿ. ಭಜಂತ್ರಿಗೆ ‘ನಾಡೋಜ ಡಾ. ಕಯ್ಯಾರ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ-2026’

0
17

ಕಾಸರಗೋಡು : ಗದಗ ಜಿಲ್ಲೆಯ ದಲಿತ ಸಾಹಿತ್ಯ ಅಕಾಡೆಮಿ, ದೆಹಲಿ – ಗದಗ ಜಿಲ್ಲಾಧ್ಯಕ್ಷರು, ಪ್ರೌಢಶಾಲೆಯ ಆದರ್ಶ ಶಿಕ್ಷಕರು ಹಾಗೂ ಸಮಾಜಸೇವಕರಾದ ಡಾ. ಶಾಂತಕುಮಾರ ಬಿ. ಭಜಂತ್ರಿ ಅವರು ಕನ್ನಡ ಭವನದ ಪ್ರತಿಷ್ಠಿತ **’ನಾಡೋಜ ಡಾ. ಕಯ್ಯಾರ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ-2026’**ಗೆ ಆಯ್ಕೆಯಾಗಿದ್ದಾರೆ.

ಶೈಕ್ಷಣಿಕ, ಸಾಹಿತ್ಯ ಹಾಗೂ ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಡಾ. ಶಾಂತಕುಮಾರ ಬಿ. ಭಜಂತ್ರಿ ಅವರು ಸಲ್ಲಿಸಿರುವ ಅಪ್ರತಿಮ ಸೇವೆ ಮತ್ತು ಸಾಧನೆಯನ್ನು ಪರಿಗಣಿಸಿ ಈ ಪ್ರತಿಷ್ಠಿತ ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಜುಲೈ 26ರಂದು ಕಾಸರಗೋಡಿನ ಕನ್ನಡ ಭವನದಲ್ಲಿ ನಡೆಯಲಿರುವ ರಜತ ಸಂಭ್ರಮ ಸಮಾರೋಪ ಕಾರ್ಯಕ್ರಮ ಹಾಗೂ ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನದ ಅಂಗವಾಗಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತದೆ.

ಈ ಕುರಿತು ಸಮ್ಮೇಳನ ಸಮಿತಿ ಅಧ್ಯಕ್ಷ ಡಾ. ಕೆ. ಎನ್. ವೆಂಕಟ್ರಮಣ ಹೊಳ್ಳ ಹಾಗೂ ಕನ್ನಡ ಭವನದ ಸ್ಥಾಪಕ ಅಧ್ಯಕ್ಷ ಡಾ. ಕೆ. ವಾಮನ್ ರಾವ್ ಬೇಕಲ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಡಾ. ಶಾಂತಕುಮಾರ ಬಿ. ಭಜಂತ್ರಿ ಅವರ ಶೈಕ್ಷಣಿಕ, ಸಾಹಿತ್ಯಿಕ, ಸಾಂಸ್ಕೃತಿಕ ಹಾಗೂ ಸಮಾಜಮುಖಿ ಸೇವೆಯನ್ನು ಗುರುತಿಸಿ ನೀಡಲಾಗುತ್ತಿರುವ ಈ ರಾಷ್ಟ್ರೀಯ ಪ್ರಶಸ್ತಿ ಗದಗ ಜಿಲ್ಲೆಗೆ ಮತ್ತೊಂದು ಹೆಮ್ಮೆಯ ಗರಿಯಾಗಿದೆ.

LEAVE A REPLY

Please enter your comment!
Please enter your name here