‘ಕನ್ನಡ ಪಯಸ್ವಿನಿ ಜಾನಪದ ರತ್ನ’ ಪ್ರಶಸ್ತಿಗೆ ಲಲಿತಮ್ಮ ಬಿ. ಹಿರೇಮಠ ಆಯ್ಕೆ

0
8

ಕಾಸರಗೋಡು : ಕೊಪ್ಪಳ ಜಿಲ್ಲೆಯ ಖ್ಯಾತ ಜಾನಪದ ಗಾಯಕಿ ಲಲಿತಮ್ಮ ಬಿ. ಹಿರೇಮಠ (ಕುಷ್ಟಗಿ) ಅವರು ಕಾಸರಗೋಡಿನ ಕನ್ನಡ ಭವನ ನೀಡುವ ಪ್ರತಿಷ್ಠಿತ **’ಕನ್ನಡ ಪಯಸ್ವಿನಿ ಜಾನಪದ ರತ್ನ ಅಚೀವ್‌ಮೆಂಟ್ ಅವಾರ್ಡ್-2026’**ಗೆ ಆಯ್ಕೆಯಾಗಿದ್ದಾರೆ.

ಜಾನಪದ ಗಾಯನ ಕ್ಷೇತ್ರದಲ್ಲಿ ಸಲ್ಲಿಸಿರುವ ವಿಶಿಷ್ಟ ಸೇವೆ ಹಾಗೂ ಸಾಧನೆಯನ್ನು ಪರಿಗಣಿಸಿ ಅವರಿಗೆ ಈ ಗೌರವವನ್ನು ನೀಡಲಾಗುತ್ತಿದೆ. ಈ ಪ್ರಶಸ್ತಿ ಜಾನಪದ ಕಲೆ ಮತ್ತು ಕನ್ನಡ ಸಂಸ್ಕೃತಿಯ ಉಳಿವು ಹಾಗೂ ಬೆಳವಣಿಗೆಗೆ ನೀಡಿದ ಕೊಡುಗೆಗೆ ನೀಡಲಾಗುವ ಪ್ರತಿಷ್ಠಿತ ಗೌರವವಾಗಿದೆ.

ಜುಲೈ 26ರಂದು ಕನ್ನಡ ಭವನದ ರಜತ ಸಂಭ್ರಮ ಸಮಾರೋಪ ಕಾರ್ಯಕ್ರಮದ ಅಂಗವಾಗಿ ನಡೆಯಲಿರುವ ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನದಲ್ಲಿ ಲಲಿತಮ್ಮ ಬಿ. ಹಿರೇಮಠ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.

ಈ ಕುರಿತು ಸಮ್ಮೇಳನ ಸಮಿತಿ ಅಧ್ಯಕ್ಷ ಡಾ. ಕೆ. ಎನ್. ವೆಂಕಟ್ರಮಣ ಹೊಳ್ಳ ಹಾಗೂ ಕನ್ನಡ ಭವನದ ಸ್ಥಾಪಕ ಅಧ್ಯಕ್ಷ ಡಾ. ಕೆ. ವಾಮನ್ ರಾವ್ ಬೇಕಲ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಾನಪದ ಸಂಗೀತ ಕ್ಷೇತ್ರದಲ್ಲಿ ಲಲಿತಮ್ಮ ಬಿ. ಹಿರೇಮಠ ಅವರು ಸಲ್ಲಿಸಿರುವ ಸೇವೆಯನ್ನು ಗುರುತಿಸಿ ಈ ಪ್ರತಿಷ್ಠಿತ ಪ್ರಶಸ್ತಿಗೆ ಆಯ್ಕೆ ಮಾಡಿರುವುದಕ್ಕೆ ಜಾನಪದ ಕಲಾಭಿಮಾನಿಗಳು ಹಾಗೂ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಅಭಿನಂದನೆ ವ್ಯಕ್ತಪಡಿಸಿದ್ದಾರೆ.

LEAVE A REPLY

Please enter your comment!
Please enter your name here