ಮದುವೆಗೆ ತೆರಳುತ್ತಿದ್ದವರ ಕಾರು ಮರಕ್ಕೆ ಡಿಕ್ಕಿ : ನಾಲ್ವರು ಸ್ಥಳದಲ್ಲೇ ಬಲಿ

0
19

ಕಣ್ಣೂರು : ಕೇರಳದ ಕಣ್ಣೂರು ಜಿಲ್ಲೆಯ ಚಾಲೋಡ್–ಮಟ್ಟನ್ನೂರು ರಸ್ತೆಯ ಕೂಡಾಲಿ ಕುಂಬತ್ ಪ್ರದೇಶದಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕಾಸರಗೋಡು ನಿವಾಸಿ ಸೇರಿದಂತೆ ನಾಲ್ವರು ಮೃತಪಟ್ಟಿದ್ದಾರೆ.

ಮೃತರನ್ನು ಕಾಸರಗೋಡು ಜಿಲ್ಲೆಯ ಮಡಿಕೈ ನಿವಾಸಿ ರಿಝ್ವಾನ್, ಶಾನ್, ಪರ್ವೇಜ್ ಛೇತ್ರಿ ಹಾಗೂ ಹರ್ಷ್ ಎಂದು ಗುರುತಿಸಲಾಗಿದೆ.

ಬೆಂಗಳೂರಿನಿಂದ ಮದುವೆ ಸಮಾರಂಭವೊಂದರಲ್ಲಿ ಭಾಗವಹಿಸಲು ತೆರಳುತ್ತಿದ್ದ ವೇಳೆ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿರುವ ಶಂಕೆ ವ್ಯಕ್ತವಾಗಿದೆ. ಡಿಕ್ಕಿಯ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಸ್ಥಳದಲ್ಲೇ ನಾಲ್ವರು ಮೃತಪಟ್ಟಿದ್ದಾರೆ.

ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ಯುವಕರು ಹಾಗೂ ಉತ್ತರ ಪ್ರದೇಶ ಮೂಲದ ಇಬ್ಬರು ಸೇರಿ ನಾಲ್ವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಕಾರಿನಲ್ಲಿದ್ದ ಮತ್ತೊಬ್ಬ ಪ್ರಯಾಣಿಕ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಕಣ್ಣೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಅಪಘಾತದ ಮಾಹಿತಿ ತಿಳಿದ ಕೂಡಲೇ ಸ್ಥಳೀಯರು, ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಮಟ್ಟನ್ನೂರು ಪೊಲೀಸರು ಸ್ಥಳಕ್ಕೆ ಧಾವಿಸಿ, ಕಾರಿನಲ್ಲಿ ಸಿಲುಕಿದ್ದವರನ್ನು ಹೊರತೆಗೆದು ಆಸ್ಪತ್ರೆಗೆ ಸಾಗಿಸಿದರು. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಅಪಘಾತದ ನಿಖರ ಕಾರಣವನ್ನು ತನಿಖೆ ನಡೆಸುತ್ತಿದ್ದಾರೆ.

LEAVE A REPLY

Please enter your comment!
Please enter your name here