ಕೃಷಿ ಕೆಲಸವೇ ಕೊನೆಯಾಯಿತು : ವಿದ್ಯುತ್ ಅವಘಡಕ್ಕೆ ದಂಪತಿ ಬಲಿ

0
101

ಬೆಳಗಾವಿ : ಜಿಲ್ಲೆಯ ಮೂಡಲಗಿ ತಾಲೂಕಿನ ನಾಗನೂರ ಗ್ರಾಮದ ಹೊರವಲಯದಲ್ಲಿ ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶಿಸಿ ದಂಪತಿ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಮಂಗಳವಾರ ನಡೆದಿದೆ.

ಮೃತರನ್ನು ನಾಗನೂರ ಗ್ರಾಮದ ನಿವಾಸಿಗಳಾದ ಮುತ್ತಪ್ಪ ಶ್ರೀಶೈಲ ಮುಗೋಳಖೋಡ (42) ಹಾಗೂ ಅವರ ಪತ್ನಿ ರಾಜಶ್ರೀ ಮುಗೋಳಖೋಡ (36) ಎಂದು ಗುರುತಿಸಲಾಗಿದೆ.

ತಮ್ಮ ಜಮೀನಿನಲ್ಲಿ ಕೃಷಿ ಕೆಲಸದಲ್ಲಿ ನಿರತರಾಗಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ಸ್ಪರ್ಶಿಸಿ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ. ಘಟನೆ ಕುರಿತು ಮಾಹಿತಿ ಪಡೆದ ಮೂಡಲಗಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

ವಿದ್ಯುತ್ ತಂತಿ ತುಂಡಾಗಿ ಬಿದ್ದಿತ್ತೇ ಅಥವಾ ಪಂಪ್‌ಸೆಟ್ ಸ್ಟಾರ್ಟರ್‌ನಿಂದ ಅವಘಡ ಸಂಭವಿಸಿತ್ತೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.