ಮುರಳಿಕೃಷ್ಣ ಕೆ. ನೀರ್ಚಾಲು ಅವರಿಗೆ ‘ಕನ್ನಡ ಪಯಸ್ವಿನಿ–ನಾದ ರತ್ನ ಅಚೀವ್ಮೆಂಟ್-2026’ ಪ್ರಶಸ್ತಿ

0
243

ಬೆಂಗಳೂರು : ಕನ್ನಡದ ಸೇವೆ ಹಾಗೂ ಸಾಧನೆಯನ್ನು ಗುರುತಿಸಿ ಮುರಳಿಕೃಷ್ಣ ಕೆ. ನೀರ್ಚಾಲು ಅವರನ್ನು ಅಂತರ್ ರಾಜ್ಯ “ಕನ್ನಡ ಪಯಸ್ವಿನಿ–ನಾದ ರತ್ನ ಅಚೀವ್ಮೆಂಟ್-2026” ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಜುಲೈ 26ರಂದು ಕನ್ನಡ ಭವನದಲ್ಲಿ ನಡೆಯಲಿರುವ ರಜತ ಸಂಭ್ರಮ ಸಮಾರೋಪ ಕಾರ್ಯಕ್ರಮ ಹಾಗೂ ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನದ ಅಂಗವಾಗಿ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು.

ಈ ಕುರಿತು ಸಮ್ಮೇಳನ ಸಮಿತಿ ಅಧ್ಯಕ್ಷ ಡಾ. ಕೆ. ಎನ್. ವೆಂಕಟ್ರಮಣ ಹೊಳ್ಳ ಹಾಗೂ ಕನ್ನಡ ಭವನದ ಸ್ಥಾಪಕ ಅಧ್ಯಕ್ಷ ಡಾ. ಕೆ. ವಾಮನ್ ರಾವ್ ಬೇಕಲ್ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.

ಸಮ್ಮೇಳನದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಸಾಧಕರಿಗೆ ಗೌರವ ಸಲ್ಲಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಅದರ ಅಂಗವಾಗಿ ಮುರಳಿಕೃಷ್ಣ ಕೆ. ನೀರ್ಚಾಲು ಅವರಿಗೆ “ಕನ್ನಡ ಪಯಸ್ವಿನಿ–ನಾದ ರತ್ನ ಅಚೀವ್ಮೆಂಟ್-2026” ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.