ಜಿಲ್ಲಾಡಳಿತ–ಗ್ರಾಮಾಭಿವೃದ್ಧಿ ಯೋಜನೆ ಸಹಯೋಗದಲ್ಲಿ ವಿಶ್ವ ಜನಸಂಖ್ಯಾ ದಿನ ಕಾರ್ಯಕ್ರಮ

0
9

ಹಿರಿಯಡ್ಕ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್( ರಿ ) ಉಡುಪಿ ತಾಲೂಕು ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮ ದಡಿಯಲ್ಲಿ ಹಿರಿಯಡ್ಕ ವಲಯದ ಪಂಚನಬೆಟ್ಟು ಜ್ಞಾನದೀಪ ಜ್ಞಾನವಿಕಾಸ ಕೇಂದ್ರದಲ್ಲಿ ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಉಡುಪಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರ ಸಹಯೋಗದೊಂದಿಗೆ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮವು ನಡೆಯಿತು.ಬೊಮ್ಮರ ಬೆಟ್ಟು ಗ್ರಾಮ ಪಂಚಾಯಿತಿಯ ಅಂಬೇಡ್ಕರ್ ಸಭಾಭವನದಲ್ಲಿ ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಡಾ. ಸತ್ಯ ಶಂಕರ್ ವೈದ್ಯಾಧಿಕಾರಿಗಳು ಪ್ರಾಥಮಿಕ ಆರೋಗ್ಯ ಕೇಂದ್ರ ಹಿರಿಯಡ್ಕ ಇವರು ವಹಿಸಿಕೊಂಡಿದ್ದರು. ಕಾರ್ಯಕ್ರಮದಲ್ಲಿ ಚಂದ್ರಕಲಾ ಕ್ಷೇತ್ರ ಆರೋಗ್ಯ ಅಧಿಕಾರಿಗಳು ಉಡುಪಿ ಇವರು ಕುಟುಂಬ ಯೋಜನೆಗಳ ಬಗ್ಗೆ ಮತ್ತು ಮಹಿಳೆಯರ ಮತ್ತು ಮಕ್ಕಳಆರೋಗ್ಯದ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸಂತೋಷ್ ಜೋಗಿ ರವರು, ಆರೋಗ್ಯ ಇಲಾಖೆಯ ಅಧಿಕಾರಿಗಳು, ಕೇಂದ್ರದ ಸದಸ್ಯರು ಉಪಸ್ಥಿತರಿದ್ದರು