ರೇಡಿಯೋ ಮಣಿಪಾಲದಲ್ಲಿ ಡೆಂಗ್ಯೂ ಕುರಿತು ವಿಶೇಷ ಸಂದರ್ಶನ

0
4

ಮಣಿಪಾಲದ ಎಂ.ಐ.ಸಿ ಕ್ಯಾಂಪಸ್ ನಲ್ಲಿರುವ ರೇಡಿಯೋ ಮಣಿಪಾಲ್ ಸಮುದಾಯ ಬಾನುಲಿ ಕೇಂದ್ರದಲ್ಲಿ ವಿಶೇಷ ಸಂದರ್ಶನ ಪ್ರಸಾರವಾಗಲಿದೆ.ಇದರಲ್ಲಿ ಉಡುಪಿ ತಾಲೂಕು ಆರೋಗ್ಯಾಧಿಕಾರಿ ಡಾ.ವಿನೋದ್ ಭೂತೆ ಭಾಗವಹಿಸಿ ಡೆಂಗ್ಯೂ ಜ್ವರದ ಕುರಿತು ಮಾಹಿತಿ ನೀಡಲಿದ್ದಾರೆ.

ಇದು ಜುಲೈ ತಿಂಗಳ 16ರಂದು ಗುರುವಾರ ಸಂಜೆ ಸಮಯ 5.55 ಕ್ಕೆ ಪ್ರಸಾರವಾಗಲಿದೆ ಮತ್ತು ಜುಲೈ17 ರಂದು ಮಧ್ಯಾಹ್ನ 1.55 ಕ್ಕೆ ಮರುಪ್ರಸಾರವಾಗಲಿದೆ. ರೇಡಿಯೊ ಮಾತ್ರವಲ್ಲದೆ ಆಂಡ್ರಾಯ್ಡ್ ಫೋನ್ ನ https://play.google.com/store/apps/details?id=com.atc.radiomanipal
ಮತ್ತು ಐಫೋನ್ ನ https://itunes.apple.com/app/id6447231815 ಲಿಂಕ್ ಮೂಲಕ ರೇಡಿಯೊ ಮಣಿಪಾಲ್ ಆಪ್ ಡೌನ್ಲೋಡ್ ಮಾಡಿ ಈ ಕಾರ್ಯಕ್ರಮ ಕೇಳಬಹುದಾಗಿದೆ ಎಂದು ಮಣಿಪಾಲ ಮಾಹೆಯ ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್ ಕಮ್ಯುನಿಕೇಶನ್ ಕ್ಯಾಂಪಸ್ ನಲ್ಲಿರುವ ರೇಡಿಯೊ ಮಣಿಪಾಲ್ ಸಮುದಾಯ ಬಾನುಲಿ ಕೇಂದ್ರದ ಪ್ರಕಟಣೆ ತಿಳಿಸಿದೆ.