ಮಾಣಿ : ಇತ್ತೀಚೆಗೆ ಸಂಭವಿಸಿದ ವಾಹನ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಮಂಗಳೂರಿನ ಎ.ಜೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಯುವವಾಹಿನಿ (ರಿ.) ಮಾಣಿ ಘಟಕದ 2026–27ನೇ ಸಾಲಿನ ಪ್ರಚಾರ ನಿರ್ದೇಶಕ ಚರಣ್ ಜೆ. ಅನಂತಾಡಿ ಅವರಿಗೆ ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ ₹75,000 ಧನಸಹಾಯ ಹಸ್ತಾಂತರಿಸಲಾಯಿತು.
ಸದಸ್ಯರ ಸ್ವಯಂಪ್ರೇರಿತ ಸಹಕಾರದಿಂದ ಈ ಧನಸಹಾಯವನ್ನು ಸಂಗ್ರಹಿಸಿ, ಅವರ ಚಿಕಿತ್ಸೆಗೆ ನೆರವಾಗುವ ಉದ್ದೇಶದಿಂದ ಕುಟುಂಬಕ್ಕೆ ಹಸ್ತಾಂತರಿಸಲಾಯಿತು. ಸಂಕಷ್ಟದ ಸಮಯದಲ್ಲಿ ಸದಸ್ಯರೊಂದಿಗೆ ಹೆಗಲಾಗಿ ನಿಲ್ಲುವುದು ಸಂಘಟನೆಯ ನಿಜವಾದ ಶಕ್ತಿಯ ಪ್ರತೀಕವಾಗಿದೆ ಎಂದು ಘಟಕದ ಅಧ್ಯಕ್ಷರಾದ ಗಣೇಶ್ ಸಾಯಿ ತಿಳಿಸಿದರು. ಈ ಸಂದಭ೯ದಲ್ಲಿ ಯುವವಾಹಿನಿ (ರಿ.) ಮಾಣಿ ಘಟಕದ ಮಾಜಿ ಅಧ್ಯಕ್ಷರು ಕಾರ್ಯದರ್ಶಿ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.

