ಮಂಗಳೂರು: ಭಾರೀ ಮಳೆ ಹಿನ್ನೆಲೆ ಜುಲೈ 23ರಂದು ಜಿಲ್ಲೆಯ ಎಲ್ಲಾ ಶಾಲೆ-ಕಾಲೇಜುಗಳಿಗೆ ರಜೆ

0
49


ಮಂಗಳೂರು: ಭಾರತೀಯ ಹವಾಮಾನ ಇಲಾಖೆ (IMD) ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ನೀಡಿರುವ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರ ಮಳೆಯೊಂದಿಗೆ ಯೆಲ್ಲೋ ಅಲರ್ಟ್ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ, ಜುಲೈ 23, 2026ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ವಸತಿ ಶಾಲೆಗಳು, ಪದವಿಪೂರ್ವ ಕಾಲೇಜುಗಳು ಹಾಗೂ ಪದವಿಪೂರ್ವ ವಸತಿ ಕಾಲೇಜುಗಳಿಗೆ ಜಿಲ್ಲಾಧಿಕಾರಿ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.
ನಿರಂತರ ಸುರಿಯುತ್ತಿರುವ ಮಳೆಯಿಂದ ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ. ಹವಾಮಾನ ಇಲಾಖೆಯ ಮುನ್ಸೂಚನೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮಾಹಿತಿಯನ್ನು ಪರಿಗಣಿಸಿ ಜಿಲ್ಲೆಯ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ಒಂದು ದಿನದ ರಜೆ ಘೋಷಿಸಲಾಗಿದೆ.
ಜಿಲ್ಲಾಡಳಿತವು ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಅನಗತ್ಯವಾಗಿ ಹೊರಗಡೆ ಸಂಚರಿಸುವುದನ್ನು ತಪ್ಪಿಸಿ, ಹವಾಮಾನ ಇಲಾಖೆಯ ಎಚ್ಚರಿಕೆಗಳನ್ನು ಪಾಲಿಸುವಂತೆ ಮನವಿ ಮಾಡಿದೆ.