ಬೆಂಗಳೂರು : ಮಾನವ ಹಕ್ಕುಗಳ ಹೋರಾಟಗಾರ್ತಿ, ಸಮಾಜ ಸೇವಕಿ ಹಾಗೂ ಶಿಕ್ಷಣ ತಜ್ಞೆ ಡಾ. ವನಿತಾ ತೋರ್ವಿ, ವಿಜಯಪುರ ಅವರಿಗೆ ಕನ್ನಡ ಭವನದಿಂದ ನೀಡಲಾಗುವ ಪ್ರತಿಷ್ಠಿತ “ನಾಡೋಜ ಡಾ. ಕಯ್ಯಾರ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ–2026” ಘೋಷಿಸಲಾಗಿದೆ.
ಜುಲೈ 26ರಂದು ಕನ್ನಡ ಭವನದ ರಜತ ಸಂಭ್ರಮ ಸಮಾರೋಪ ಕಾರ್ಯಕ್ರಮದ ಅಂಗವಾಗಿ ನಡೆಯಲಿರುವ ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನದಲ್ಲಿ ಡಾ. ವನಿತಾ ತೋರ್ವಿ ಅವರಿಗೆ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು.
ಈ ಕುರಿತು ಸಮ್ಮೇಳನ ಸಮಿತಿ ಅಧ್ಯಕ್ಷ ಡಾ. ಕೆ. ಎನ್. ವೆಂಕಟ್ರಮಣ ಹೊಳ್ಳ ಹಾಗೂ ಕನ್ನಡ ಭವನದ ಸ್ಥಾಪಕ ಅಧ್ಯಕ್ಷ ಡಾ. ಕೆ. ವಾಮನ್ ರಾವ್ ಬೇಕಲ್ ಅವರು ಜಂಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

