ಪಾಡ್ಯಾರು ಸರ್ಕಾರಿ ಶಾಲೆಯಲ್ಲಿ ದಾನಿಗಳ ನೆರವಿನಿಂದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಕಿಟ್ ವಿತರಣೆ

0
18

ಪಾಡ್ಯಾರು : ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಪಾಡ್ಯಾರು ವತಿಯಿಂದ ದಾನಿಗಳ ಸಹಕಾರದಿಂದ ಸಂಗ್ರಹಿಸಲಾದ ವಿವಿಧ ಶೈಕ್ಷಣಿಕ ಸಾಮಗ್ರಿಗಳ ವಿತರಣಾ ಕಾರ್ಯಕ್ರಮವು ಜುಲೈ 24ರಂದು (ಶುಕ್ರವಾರ) ಮಧ್ಯಾಹ್ನ 3 : 00 ಗಂಟೆಗೆ ಶಾಲಾ ಆವರಣದಲ್ಲಿ ನಡೆಯಲಿದೆ.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಶಾಲಾ ಬ್ಯಾಗ್, ಪುಸ್ತಕಗಳು, ಬರವಣಿಗೆ ಸಾಮಗ್ರಿಗಳು, ಕೊಡೆ, ಊಟದ ತಟ್ಟೆ, ಲೋಟ, ನೀರಿನ ಬಾಟಲ್, ಪೆನ್ಸಿಲ್ ಬಾಕ್ಸ್, ಎಕ್ಸಾಮ್ ಪ್ಯಾಡ್ ಸೇರಿದಂತೆ ಅಗತ್ಯ ಶೈಕ್ಷಣಿಕ ಉಪಕರಣಗಳನ್ನು ವಿತರಿಸಲಾಗುತ್ತದೆ.

ಕಾರ್ಯಕ್ರಮದ ದಿವ್ಯ ಉಪಸ್ಥಿತಿಯನ್ನು ಶ್ರೀಕ್ಷೇತ್ರ ಬಳ್ಕೊಟ್ಟು ಮಠ ಹೊಸ್ಮಾರಿನ ಪೀಠಾಧ್ಯಕ್ಷರಾದ ಪರಮಪೂಜ್ಯ ಶ್ರೀ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ವಹಿಸಲಿದ್ದಾರೆ, ಮುಖ್ಯ ಅತಿಥಿಯಾಗಿ ಮಾಜಿ ವಿಧಾನ ಪರಿಷತ್ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ನಿಕ್ ಭಾಗವಹಿಸಲಿದ್ದಾರೆ.

ಇದೇ ಸಂದರ್ಭದಲ್ಲಿ ಮೇಲ್ಕಂಡ ಶೈಕ್ಷಣಿಕ ಸಾಮಗ್ರಿಗಳನ್ನು ದೇಣಿಗೆಯಾಗಿ ನೀಡಿದ ದಾನಿಗಳು ಹಾಗೂ ಶಾಲಾಭಿಮಾನಿಗಳನ್ನು ಗೌರವಪೂರ್ವಕವಾಗಿ ಸ್ವಾಗತಿಸಲಾಗುವುದು ಎಂದು ಶಾಲಾ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.