ಉಡುಪಿ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಉಡುಪಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಉಡುಪಿ, ಜಿಲ್ಲಾ ಆಸ್ಪತ್ರೆ ಉಡುಪಿ, ಕರ್ನಾಟಕ ಮೆದುಳು ಆರೋಗ್ಯ ಉಪಕ್ರಮ (ಕಭೀ), ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಮೆದುಳು ದಿನಾಚರಣೆ ಯ ಉದ್ಘಾಟನಾ ಕಾರ್ಯಕ್ರಮ ವನ್ನು ಸಮುದಾಯ ಆರೋಗ್ಯ ಕೇಂದ್ರ ಹೆಬ್ರಿ ಯಲ್ಲಿ ಗುರುವಾರ ಜುಲೈ 23 ರಂದು ಹಮ್ಮಿಕೊಳ್ಳಲಾಯಿತು ಹಾಗೂ ಈ ಕಾರ್ಯಕ್ರಮದಲ್ಲಿ ವಿಶ್ವ ಮೆದುಳು ದಿನದ ಬ್ಯಾನರ್ ಮತ್ತು IEC ಪ್ರದರ್ಶನ ನಡೆಯಿತು.
ಕಾರ್ಯಕ್ರಮ ದ ಉದ್ಘಾಟನೆ ಯನ್ನು ನೆರವೇರಿಸಿದ ಮಾನ್ಯ ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿಗಳು ಹಾಗೂ ಕಭೀ ಕಾರ್ಯಕ್ರಮದ ನೂಡಲ್ ಅಧಿಕಾರಿಗಳಾದ ಡಾ. ಲತಾ ನಾಯಕ್ ಅವರು ಮಾತನಾಡಿ, ಮೆದುಳು ಆರೋಗ್ಯ ದಲ್ಲಿ ಜೀವನ ಶೈಲಿ ಹಾಗೂ ಆಹಾರ ಶೈಲಿ ಬಹು ಮುಖ್ಯ ಪತ್ರ ವಹಿಸುತ್ತದೆ ಎಂದು ತಿಳಿಸಿದರು. ಕಭೀ ಕಾರ್ಯಕ್ರಮದಲ್ಲಿ, ನರವೈಜ್ಞಾನಿಕ ಖಾಯಿಲೆಗಳಾದ ತಲೆನೋವು. ಪಾರ್ಶ್ವವಾಯು, ಅಪಸ್ಮಾರ ಹಾಗೂ ಡಿಮೆಂಶಿಯ ಅಂತಹ ಖಾಯಿಲೆಗಳಿಗೆ ಚಿಕಿತ್ಸೆ ನೀಡಲಾಗುತ್ತದೆ ಹಾಗೂ ನರವೈಜ್ಞಾನಿಕ ಖಾಯಿಲೆ ಇರುವಂತಹ ವ್ಯಕ್ತಿಗೆ ಬೆಂಗಳೂರಿನ ನಿಮ್ಹಾನ್ಸ್ ಇಂದ ಟೆಲಿ ನ್ಯೂರೋಲಾಜಿ ಎಂಬ ಸೇವೆಯನ್ನು ನೀಡಲಾಗುತ್ತದೆ. ಹೀಗೆ ಕಭೀ ಉತ್ತಮವಾದ ತಂಡದೊಂದಿಗೆ ಕಾರ್ಯನಿರ್ವಹಿಸುತ್ತಿದೆ ಎನ್ನುವುದರ ಜೊತೆಗೆ ಪ್ರಾಸ್ತಾವಿಕವಾಗಿ ಕಾರ್ಯಕ್ರಮದ ಬಗ್ಗೆ ತಿಳಿಸಿದರು.
ಸಮುದಾಯ ಆರೋಗ್ಯ ಕೇಂದ್ರ ಹೆಬ್ರಿ ಯ ಆಡಳಿತ ವೈದ್ಯಧಿಕಾರಿಗಳಾದ ಡಾ. ಸಂತೋಷ ಬೈಲೂರ್ ರವರು ಕಾರ್ಯಕ್ರಮದ ಘನ ಅಧ್ಯಕ್ಷತೆಯನ್ನು ವಹಿಸಿದ್ದು ಈ ತರಹದ ಕಾರ್ಯಕ್ರಮ ಬಹಳ ಮುಖ್ಯವಾಗಿದೆ ಹಾಗೂ ಮೆದುಳು ಆರೋಗ್ಯ ಉತ್ತಮವಾಗಿಸಿಕೊಳ್ಳಬೇಕಾಗುವುದು ಬಹಳ ಮುಖ್ಯ ಎಂದು ತಿಳಿಸಿದರು.
ವೇದಿಕೆ ಯಲ್ಲಿ ಅತಿಥಿಗಳಾಗಿ CHC ಹೆಬ್ರಿಯ ಡಾ. ಉಮಾ ಶೆಡ್ತಿ ಮಕ್ಕಳ ತಜ್ಞರು ಹಾಗೂ ಡಾ. ಅರ್ಪಿತಾ ವೈದ್ಯಾಧಿಕಾರಿಗಳು ಉಪಸ್ಥಿತರಿದ್ದರು.
ಮೆದುಳು ಆರೋಗ್ಯ, ಸ್ಟ್ರೋಕ್ ಕುರಿತು ಬಿ. ಪಿ. ಶುಗರ್ ಸ್ಕ್ರೀನಿಂಗ್ ಹಾಗೂ ಮಾಹಿತಿ ಕಾರ್ಯಕ್ರಮವನ್ನು ವೈವಿಧ್ಯಮಯವಾಗಿ ಕಭೀ ಕಾರ್ಯಕ್ರಮದ ಜಿಲ್ಲಾ ಸಂಯೋಜಕರಾದ ಶ್ರೀಮತಿ ಅರ್ಪಿತಾ ಬ್ರಹ್ಮಾವರ, ಕ್ಲಿನಿಕಲ್ ಸೈಕಾಲಜಿಸ್ಟ್ ಆದ ಕು. ರಕ್ಷಿತಾ ಎಮ್. ಹಾಗೂ ಫಿಸಿಯೋ ಥೆರಪಿಸ್ಟ್ ಆದ ಕು. ಯಶಸ್ವಿನಿ. ವಿ. ಯವರು ಸಮುದಾಯದ ಆರೋಗ್ಯ ಕೇಂದ್ರದ ಸಿಬ್ಬಂದಿ ವರ್ಗ ದವರ ಸಹಕಾರದೊಂದಿಗೆ ನೆರವೇರಿಸಿದರು.
ಕಾರ್ಯಕ್ರಮವನ್ನು ಶ್ರೀಮತಿ ಅರ್ಪಿತಾ ಬ್ರಹ್ಮಾವರ ನಿರೂಪಿಸಿ, ಸ್ವಾಗತಿಸಿ, ವಂದಿಸಿದರು.

