ಯು.ಟಿ. ಖಾದರ್ ಅವರಿಗೆ ಅಮೆರಿಕದ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್ ಅವಾರ್ಡ್–2026’

0
14

ಮಂಗಳೂರು : ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಅವರಿಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್ ಅವಾರ್ಡ್–2026’ ಪ್ರದಾನ ಮಾಡಲಾಗುತ್ತಿದೆ.

ಸಾರ್ವಜನಿಕ ಆರೋಗ್ಯ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆ, ಜನಪರ ಆಡಳಿತ ಹಾಗೂ ಸಮುದಾಯ ಆಧಾರಿತ ಅಭಿವೃದ್ಧಿ ಕಾರ್ಯಗಳನ್ನು ಪರಿಗಣಿಸಿ ಅಮೆರಿಕದ American Multi Ethnic Commission ಈ ಅಂತಾರಾಷ್ಟ್ರೀಯ ಪ್ರಶಸ್ತಿಗೆ ಯು.ಟಿ. ಖಾದರ್ ಅವರನ್ನು ಆಯ್ಕೆ ಮಾಡಿದೆ.

ಪ್ರಶಸ್ತಿ ಸ್ವೀಕರಿಸಲು ಯು.ಟಿ. ಖಾದರ್ ಅವರು ಮಂಗಳೂರಿನಿಂದ ಅಮೆರಿಕಕ್ಕೆ ಪ್ರಯಾಣ ಬೆಳೆಸಿದ್ದು, ಜುಲೈ 25ರಂದು ಇಲಿನಾಯ್ಸ್ ರಾಜ್ಯದ ನೇಪರ್‌ವಿಲ್ ನಗರದ ಯೆಲ್ಲೋ ಬಾಕ್ಸ್ ಆಡಿಟೋರಿಯಂನಲ್ಲಿ ನಡೆಯುವ ವಿಶೇಷ ಸಮಾರಂಭದಲ್ಲಿ ಪ್ರಶಸ್ತಿ ಸ್ವೀಕರಿಸಲಿದ್ದಾರೆ.

ಈ ಪ್ರಶಸ್ತಿಗೆ ಆಯ್ಕೆಯಾದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಯು.ಟಿ. ಖಾದರ್ ಪಾತ್ರರಾಗಿದ್ದು, ಇದು ಕರ್ನಾಟಕ ಹಾಗೂ ಕರಾವಳಿ ಭಾಗಕ್ಕೆ ಹೆಮ್ಮೆಯ ಕ್ಷಣವಾಗಿದೆ. ರಾಜ್ಯದ ಸಾರ್ವಜನಿಕ ಆರೋಗ್ಯ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಗೆ ಜಾಗತಿಕ ಮಟ್ಟದಲ್ಲಿ ಮತ್ತೊಂದು ಮಹತ್ವದ ಮಾನ್ಯತೆ ದೊರೆತಂತಾಗಿದೆ.