ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗಾವಕಾಶ; 56 ಜವಾನ ಹುದ್ದೆಗಳಿಗೆ ಅರ್ಜಿ ಆಹ್ವಾನ

0
9

ಶಿವಮೊಗ್ಗ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಚೇರಿಯು ತನ್ನ ನ್ಯಾಯಾಲಯ ಘಟಕದಲ್ಲಿ ಖಾಲಿ ಇರುವ 56 ಜವಾನ (Peon) ಹುದ್ದೆಗಳನ್ನು ನೇರನೇಮಕಾತಿ  ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಶಿವಮೊಗ್ಗ ಜಿಲ್ಲಾ ನ್ಯಾಯಾಲಯದ ಅಧಿಕೃತ ಅಧಿಸೂಚನೆ (ಅಧಿಸೂಚನೆ ಸಂಖ್ಯೆ: ADM.DJS.16342/2026) ಪ್ರಕಾರ ಈ ನೇಮಕಾತಿ ಪ್ರಕ್ರಿಯೆ ನಡೆಯಲಿದೆ.

ಹುದ್ದೆಯ ವಿವರಗಳು ಮತ್ತು ಅರ್ಜಿ ಸಲ್ಲಿಕೆ ಮಾಹಿತಿ:

ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಆನ್‌ಲೈನ್ ಮೂಲಕವೇ ಸಲ್ಲಿಸಬೇಕಾಗಿದೆ. ಅರ್ಜಿಗಳನ್ನು ಶಿವಮೊಗ್ಗ ಜಿಲ್ಲಾ ನ್ಯಾಯಾಲಯದ ಅಧಿಕೃತ ವೆಬ್‌ಸೈಟ್‌ shivamogga.dcourts.gov.in/notice-category/recruitments/ ನಲ್ಲಿ ನೀಡಲಾದ ಲಿಂಕ್ ಮೂಲಕ ಸಲ್ಲಿಸಬಹುದು.

ಅರ್ಜಿ ಸಲ್ಲಿಕೆಯ ಪ್ರಕ್ರಿಯೆಯು ದಿನಾಂಕ ಜುಲೈ 23 ರಿಂದ ಪ್ರಾರಂಭವಾಗಿದೆ. ಭರ್ತಿ ಮಾಡಿದ ಅರ್ಜಿಗಳನ್ನು ಆಗಸ್ಟ್​​​ 24 ರ ರಾತ್ರಿ 11:59 ರವರೆಗೆ ಸಲ್ಲಿಸಲು ಅವಕಾಶವಿರುತ್ತದೆ. ಕೊನೆಯ ದಿನಾಂಕದ ನಂತರ ಬರುವ ಯಾವುದೇ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲವಾದ್ದರಿಂದ ಆಸಕ್ತ ಅಭ್ಯರ್ಥಿಗಳು ನಿಗದಿತ ಸಮಯದೊಳಗೆ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ.