ಕೆದ್ದು ಹಾಸ್ಟೆಲ್ ಆವರಣದಲ್ಲಿ ಬೃಹತ್ ಕಾಳಿಂಗ ಸರ್ಪ; ಸುರಕ್ಷಿತವಾಗಿ ರಕ್ಷಿಸಿದ ಸ್ನೇಕ್ ಅಶೋಕ್

0
121

ಬೆಳ್ತಂಗಡಿ : ಕೆದ್ದು ಹಾಸ್ಟೆಲ್ ಆವರಣದಲ್ಲಿ ಬೃಹತ್ ಗಾತ್ರದ ಕಾಳಿಂಗ ಸರ್ಪ (King Cobra) ಕಾಣಿಸಿಕೊಂಡು ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು. ಸ್ಥಳೀಯರು ಗಮನಿಸಿದ ಕೂಡಲೇ ಹಾವು ರಕ್ಷಕ ಸ್ನೇಕ್ ಅಶೋಕ್ ಬೆಳ್ತಂಗಡಿ ಅವರಿಗೆ ಮಾಹಿತಿ ನೀಡಿದರು. ಸ್ಥಳಕ್ಕೆ ಆಗಮಿಸಿದ ಸ್ನೇಕ್ ಅಶೋಕ್ ಅವರು ಅತ್ಯಂತ ಎಚ್ಚರಿಕೆಯಿಂದ ಕಾರ್ಯಾಚರಣೆ ನಡೆಸಿ ಬೃಹತ್ ಗಾತ್ರದ ಕಾಳಿಂಗ ಸರ್ಪವನ್ನು ಸುರಕ್ಷಿತವಾಗಿ ರಕ್ಷಿಸಿದರು.