ಅಂಬಿಕಾ ಪದವಿಪೂರ್ವ ಕಾಲೇಜಿನ ಸಹಯೋಗದಲ್ಲಿ ಸುದಾನ ಸ್ಪೋರ್ಟ್ಸ್ ಕ್ಲಬ್ ನಲ್ಲಿ ನಡೆದ ವಿದ್ಯಾಭಾರತಿ ಜಿಲ್ಲಾಮಟ್ಟದ ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ಹಾಗೂ ಬಾಲಕಿಯರ ತಂಡ ಭಾಗವಹಿಸಿತು.
ಈ ಪಂದ್ಯಾಟದಲ್ಲಿ ಬಾಲಕರ ತಂಡ ದ್ವಿತೀಯ ಸ್ಥಾನ ಪಡೆದಿರುತ್ತದೆ. ಬಾಲಕರ ತಂಡದಲ್ಲಿ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಾದ ಗಗನ್‌ದೀಪ್ ಬಿ.ಎಮ್, ಶಿವಕೀರ್ತನ್ ಕೆ, ಮನ್ವಿತ್ ಎನ್ ಹಾಗೂ ಪ್ರಥಮ ವಾಣಿಜ್ಯ ವಿಭಾಗದ ಪ್ರಥಮ್ ಕಶ್ಯಪ್ ಕೆ.ಬಿ ಭಾಗವಹಿಸಿದ್ದರು. ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್, ಡಾ. ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತದೆ. ಇವರನ್ನು ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು ಅಭಿನಂದಿಸಿದ್ದಾರೆ.

