ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ 20ನೇ ವರ್ಷದ ಅಬ್ಬನಡ್ಕ ಗಣೇಶೋತ್ಸವ ಸಂಭ್ರಮದ ಪೂರ್ವಭಾವಿ ಸಭೆ

0
30

ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ಪರಿಸರ ಸ್ನೇಹಿಯಾಗಿ, ಸಮಾಜಮುಖಿ ಚಿಂತನೆಯ ಸೌಹಾರ್ದಯುತ ಅಬ್ಬನಡ್ಕ ಗಣೇಶೋತ್ಸವ ಸಂಭ್ರಮ ಆಚರಣೆ – ಪ್ರದೀಪ್ ಸುವರ್ಣ

ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ ಮತ್ತು ಅಬ್ಬನಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ನೇತೃತ್ವದಲ್ಲಿ ಜರಗಲಿರುವ 20ನೇ ವರ್ಷದ ಅಬ್ಬನಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಂಭ್ರಮದ ಪೂರ್ವಭಾವಿ ಸಭೆಯು ಆದಿತ್ಯವಾರ ಸಂಘದ ರಜತ ಮಹೋತ್ಸವ ಸಭಾಂಗಣದಲ್ಲಿ ಜರಗಿತು.

ಅಬ್ಬನಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾದ ಪ್ರದೀಪ್ ಸುವರ್ಣ ಅವರು ಮಾತನಾಡಿ ಧಾರ್ಮಿಕ ಪೂಜಾ ಕಾರ್ಯಕ್ರಮಗಳು, ಸಾಂಸ್ಕೃತಿಕ, ಕ್ರೀಡಾ ಕಾರ್ಯಕ್ರಮಗಳನ್ನು ಅತ್ಯಂತ ಅಚ್ಚುಕಟ್ಟಾಗಿ ಹಾಗೂ ಅತ್ಯಂತ ಶಿಸ್ತು ಬದ್ಧವಾಗಿ ಮತ್ತು ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡುವುದರ ಜೊತೆಗೆ ಪ್ಲಾಸ್ಟಿಕ್ ಉತ್ಪನ್ನಗಳ ಬಳಕೆಯನ್ನು ಕಡಿಮೆ ಮಾಡಿ ಪರಿಸರ ಸ್ನೇಹಿಯಾಗಿ, ಸೌಹಾರ್ದಯುತವಾಗಿ ಈ ವರ್ಷದ ಅಬ್ಬನಡ್ಕ ಗಣೇಶೋತ್ಸವ ಸಂಭ್ರಮ ಅತ್ಯಂತ ಅದ್ದೂರಿಯಾಗಿ ವಿಜೃಂಭಣೆಯಿಂದ ಜರಗಲಿದೆ ಎಂದರು.

ಈ ಸಂದರ್ಭದಲ್ಲಿ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ಬಿನ ಅಧ್ಯಕ್ಷರಾದ ಸುರೇಶ್ ಅಬ್ಬನಡ್ಕ, ಸಂಚಾಲಕರಾದ ಅಬ್ಬನಡ್ಕ ಸಂದೀಪ್ ಪೂಜಾರಿ, ನಿಕಟಪೂರ್ವ ಅಧ್ಯಕ್ಷರಾದ ದಿನೇಶ್ ಪೂಜಾರಿ ಬಿರೋಟ್ಟು, ಕಾರ್ಯದರ್ಶಿ ಸತೀಶ್ ಅಬ್ಬನಡ್ಕ, ಮಹಿಳಾ ಸಂಘಟನಾ ಕಾರ್ಯದರ್ಶಿ ಸುಲೋಚನಾ ಕೋಟ್ಯಾನ್, ಗಣೇಶೋತ್ಸವ ಸಮಿತಿಯ ಕಾರ್ಯದರ್ಶಿ ಸುಭಾಷ್ ಕುಮಾರ್, ಸಂಘದ ಪೂರ್ವ ಅಧ್ಯಕ್ಷರುಗಳಾದ ರಘುವೀರ್ ಶೆಟ್ಟಿ, ಸುರೇಶ್ ಕಾಸರಬೈಲು, ರಾಜೇಶ್ ಕೋಟ್ಯಾನ್, ಸಂಘದ ಸದಸ್ಯರುಗಳಾದ ಲೀಲಾ ಪೂಜಾರಿ, ಲಲಿತಾ ಆಚಾರ್ಯ, ಸಂಧ್ಯಾ ಶೆಟ್ಟಿ, ಹರಿಣಿ ಪೂಜಾರಿ, ವೀಣಾ ಆಚಾರ್ಯ, ಪುಷ್ಪ ಕುಲಾಲ್, ವೀಣಾ ಪೂಜಾರಿ, ಪದ್ಮಶ್ರೀ ಪೂಜಾರಿ ಅನ್ನಪೂರ್ಣ ಕಾಮತ್, ಹರೀಶ್ ಪೂಜಾರಿ, ಶ್ರೀಕಾಂತ್ ಆಚಾರ್ಯ, ಯೋಗೀಶ್ ಆಚಾರ್ಯ ಮೊದಲಾದವರು ಉಪಸ್ಥಿತರಿದ್ದರು.