ಮುಲ್ಕಿ : ಪಡುಪಣಂಬೂರಿನ ಮುಲ್ಕಿ ಅರಮನೆಯ ಜಿನಚಂದ್ರ ಜೈನ್ (74)ಅನಾರೋಗ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ರಾತ್ರಿ ನಿಧನರಾದರು.
ಅವರು ಪತ್ನಿ ಇಬ್ಬರು ಪುತ್ರಿಯರು ಹಾಗೂ ಅಪಾರ ಕುಟುಂಬಸ್ಥರು,ಬಂಧು ಬಳಗವನ್ನು ಆಗಲಿದ್ದಾರೆ. ಅವರು ಜೆಡಿಎಸ್ ಪಕ್ಷದ ಮೂಲಕ ಪಡುಪಣಂಬೂರು ಗ್ರಾಮ ಪಂಚಾಯತ್ ನ ಉಪಾಧ್ಯಕ್ಷರಾಗಿ, ಸದಸ್ಯರಾಗಿ ಬಳಿಕ ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತರಾಗಿ ಸೇವೆ ಸಲ್ಲಿಸಿದ್ದರು.
ಪಡುಪಣಂಬೂರು ಮುಲ್ಕಿ ಅರಮನೆಯ ಕಂಬಳ ಸಹಿತ ವಿವಿಧ ಶೈಕ್ಷಣಿಕ ಹಾಗೂ ಧಾರ್ಮಿಕ, ಕಾರ್ಯಕ್ರಮಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಜನಾನುರಾಗಿಯಾಗಿದ್ದರು.
ಅವರ ನಿಧನಕ್ಕೆ ಬೆಂಗಳೂರಿನ ಆಧ್ಯಾತ್ಮಿಕ ವಿಶ್ವಗುರು ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ, ಮುಲ್ಕಿ ಸೀಮೆಯ ಅರಸರಾದ ದುಗ್ಗಣ್ಣ ಸಾವಂತರು,ಶಾಸಕ ಉಮಾನಾಥ ಕೋಟ್ಯಾನ್, ಮಾಜೀ ಸಚಿವ ಅಭಯ ಚಂದ್ರ ಜೈನ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ,ಧರ್ಮದರ್ಶಿ ಡಾ ಹರಿಕೃಷ್ಣ ಪುನರೂರು, ಉದ್ಯಮಿ ಅರವಿಂದ ಪೂಂಜಾ ಕಾರ್ನಾಡ್, ವಕೀಲರಾದ ಚಂದ್ರಶೇಖರ ಕಾಸಪ್ಪಯ್ಯನವರ ಮನೆ,ಕೆಪಿಸಿಸಿ ಸದಸ್ಯ ವಸಂತ್ ಬೆರ್ನಾಡ್, ಗೌತಮ್ ಜೈನ್ ಮುಲ್ಕಿ ಅರಮನೆ,ಪಡುಪಣಂಬೂರು ಗ್ರಾ. ಪಂ ಮಾಜೀ ಅಧ್ಯಕ್ಷರಾದ ವಿನೋದ್ ಸಾಲ್ಯಾನ್ ಬೆಳ್ಳಾಯರು,ಕುಸುಮಾ ಚಂದ್ರಶೇಖರ್,ಮಾಜೀ ಉಪಾಧ್ಯಕ್ಷ ಹೇಮನಾಥ ಅಮೀನ್ ,ಮಾಜೀ ಸದಸ್ಯರಾದ ಉಮೇಶ್ ಪೂಜಾರಿ, ಹರಿಪ್ರಸಾದ್, ಡಾ ಹರಿಶ್ಚಂದ್ರ ಪಿ ಸಾಲ್ಯಾನ್, ಸುಚಿಂದ್ರ ಅಮೀನ್, ಹಳೆಯಂಗಡಿ ಪಿಸಿಎ ಬ್ಯಾಂಕ್ ಅಧ್ಯಕ್ಷ ಸತೀಶ್ ಭಟ್, ನಿರ್ದೇಶಕ ಧರ್ಮಾನಂದ ಶೆಟ್ಟಿಗಾರ್, ಶಂಕರ್ ಶೆಟ್ಟಿಗಾರ್ ಬೆಳ್ಳಾಯರು, ಜೈ ಕೃಷ್ಣ ಕೋಟ್ಯಾನ್, ಮುಲ್ಕಿ ಸೀಮೆ ಅರಸು ಕಂಬಳ ಸಮಿತಿಯ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

