ಬಂಟ್ವಾಳ : ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬಂಟ್ವಾಳ ಹಾಗೂ ಶ್ರೀ ವೆಂಕಟರಮಣ ಸ್ವಾಮಿ ಆಂಗ್ಲ ಮಾಧ್ಯಮ ಶಾಲೆ, ವಿದ್ಯಾಗಿರಿ ಬಂಟ್ವಾಳ ಇವರ ಸಂಯುಕ್ತ ಆಶ್ರಯದಲ್ಲಿ 2026–27ನೇ ಸಾಲಿನ ತಾಲೂಕು ಮಟ್ಟದ 14 ಹಾಗೂ 17 ವರ್ಷದೊಳಗಿನ ಬಾಲಕ–ಬಾಲಕಿಯರ ಟೇಬಲ್ ಟೆನ್ನಿಸ್ ಪಂದ್ಯಾಟವು ಜುಲೈ 29ರಂದು ಶಾಲಾ ಆವರಣದಲ್ಲಿ ಯಶಸ್ವಿಯಾಗಿ ನಡೆಯಿತು.
ಪಂದ್ಯಾಟವನ್ನು ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಪ್ಪ ಎಲ್.ಬಿ. ಉದ್ಘಾಟಿಸಿ, “ವಿದ್ಯಾರ್ಥಿಗಳ ದೈಹಿಕ ಹಾಗೂ ಮಾನಸಿಕ ಆರೋಗ್ಯ ವೃದ್ಧಿಯಲ್ಲಿ ಕ್ರೀಡೆಯು ಪ್ರಮುಖ ಪಾತ್ರ ವಹಿಸುತ್ತದೆ. ಶಿಕ್ಷಣದ ಜೊತೆಗೆ ಕ್ರೀಡೆಯೂ ಸಮಾನವಾಗಿ ಮಹತ್ವದ್ದಾಗಿದೆ” ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಆಶಾ ನಾಯಕ್, ಗ್ರೇಡ್-1 ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಶಿವಪ್ರಸಾದ್ ರೈ ಕೆ., ಶಿಕ್ಷಣ ಸಂಯೋಜಕ ರಮಾನಂದ, ನೋಡಲ್ ಶಿಕ್ಷಕರಾದ ಜಯಂತ್, ಚಂದ್ರಹಾಸ ಶೆಟ್ಟಿ, ಶಾಲೆಯ ಮುಖ್ಯೋಪಾಧ್ಯಾಯ ಹರಿಪ್ರಸಾದ್, ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ಚೈತ್ರ ಶೆಟ್ಟಿ, ಪೂರ್ವಪ್ರಾಥಮಿಕ ವಿಭಾಗದ ಸಂಯೋಜಕಿ ವೀಣಾ ದೇವಾಡಿಗ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಸುಮಾರು 12 ತಂಡಗಳು ಮೂರು ವಿಭಾಗಗಳಲ್ಲಿ ಭಾಗವಹಿಸಿ ಕ್ರೀಡಾ ಕೌಶಲ್ಯ ಪ್ರದರ್ಶಿಸಿದವು.
ಪಂದ್ಯಾಟದ ಫಲಿತಾಂಶಗಳು:
- ಪ್ರಾಥಮಿಕ ಬಾಲಕಿಯರ ವಿಭಾಗ:
- ಪ್ರಥಮ – ಎಸ್.ವಿ.ಎಸ್ ದೇವಳ ಆಂಗ್ಲ ಮಾಧ್ಯಮ ಶಾಲೆ, ಬಂಟ್ವಾಳ
- ದ್ವಿತೀಯ – ಎಸ್.ವಿ.ಎಸ್ ಆಂಗ್ಲ ಮಾಧ್ಯಮ ಶಾಲೆ, ವಿದ್ಯಾಗಿರಿ ಬಂಟ್ವಾಳ
- ಪ್ರಾಥಮಿಕ ಬಾಲಕರ ವಿಭಾಗ:
- ಪ್ರಥಮ – ಎಸ್.ವಿ.ಎಸ್ ದೇವಳ ಆಂಗ್ಲ ಮಾಧ್ಯಮ ಶಾಲೆ, ಬಂಟ್ವಾಳ
- ದ್ವಿತೀಯ – ಎಸ್.ವಿ.ಎಸ್ ಆಂಗ್ಲ ಮಾಧ್ಯಮ ಶಾಲೆ, ವಿದ್ಯಾಗಿರಿ ಬಂಟ್ವಾಳ
- ಪ್ರೌಢಶಾಲಾ ಬಾಲಕಿಯರ ವಿಭಾಗ:
- ಪ್ರಥಮ – ಎಸ್.ವಿ.ಎಸ್ ದೇವಳ ಆಂಗ್ಲ ಮಾಧ್ಯಮ ಶಾಲೆ, ಬಂಟ್ವಾಳ
- ದ್ವಿತೀಯ – ಕಾರ್ಮೆಲ್ ಇಂಗ್ಲಿಷ್ ಮೀಡಿಯಂ ಶಾಲೆ, ಮೊಡಂಕಾಪು
- ಪ್ರೌಢಶಾಲಾ ಬಾಲಕರ ವಿಭಾಗ:
- ಪ್ರಥಮ – ಎಸ್.ವಿ.ಎಸ್ ದೇವಳ ಆಂಗ್ಲ ಮಾಧ್ಯಮ ಶಾಲೆ, ಬಂಟ್ವಾಳ
- ದ್ವಿತೀಯ – ಶ್ರೀ ಸತ್ಯ ಸಾಯಿ ಸೇವಾ ಕೇಂದ್ರ, ಅಳಿಕೆ
ಸಮಾರೋಪ ಸಮಾರಂಭದಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಹಾಗೂ ಪ್ರಮಾಣಪತ್ರಗಳನ್ನು ವಿತರಿಸಿ ಅಭಿನಂದಿಸಲಾಯಿತು.
ಕಾರ್ಯಕ್ರಮದಲ್ಲಿ ದೈಹಿಕ ಶಿಕ್ಷಣ ಶಿಕ್ಷಕ ರಾಜೇಶ್ ಕುಮಾರ್ ಸ್ವಾಗತಿಸಿದರು. ದೈಹಿಕ ಶಿಕ್ಷಣ ಶಿಕ್ಷಕಿ ಪ್ರತೀಕ್ಷಾ ಕುಮಾರಿ ವಂದಿಸಿದರು. ಸಹ ಶಿಕ್ಷಕಿ ಶ್ವೇತಾ ಕಾರ್ಯಕ್ರಮವನ್ನು ನಿರೂಪಿಸಿದರು.

