ದಾವಣಗೆರೆ : ಕೇರಳ ರಾಜ್ಯದ ಕಾಸರಗೋಡಿನ ಕಲ್ಲಕಟ್ಟ ಪ್ರಾಥಮಿಕ ಶಾಲೆಯಲ್ಲಿ 7ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಕುಮಾರಿ ಅಪರ್ಣಾ ಪಾಣೂರು ಇವರಿಗೆ ಇತ್ತೀಚಿಗೆ ಶಾಮನೂರು ಶಿವಶಂಕರಪ್ಪ ಪಾರ್ವತಮ್ಮ ಸಮುದಾಯ ಭವನದ ಬೃಹತ್ ವೇದಿಕೆಯಲ್ಲಿ ದಾವಣಗೆರೆಯ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಆಶ್ರಯದಲ್ಲಿ ಅವಳ ಸಾಧನೆಗಳನ್ನು ಗುರುತಿಸಿ ಸನ್ಮಾನ ಮಾಡಲಾಯಿತು ಎಂದು ಸಂಸ್ಥೆಯ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್ ಶೆಣೈಯವರು ತಿಳಿಸಿದ್ದಾರೆ.
ಅಪರ್ಣಾ ಪಾಣೂರು ಬಾಲಕಿ, ಯೋಗಭ್ಯಾಸ, ಭರತನಾಟ್ಯ, ಹರಿಕಥೆ, ಸಂಗೀತ, ಗಮಕ, ಭಗವದ್ಗೀತಾ ಪಾರಾಯಣ ಮುಂತಾದ ಆಧ್ಯಾತ್ಮಿಕ, ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಚಿಕ್ಕ ವಯಸ್ಡಿನಲ್ಲೇ ಚಟುವಟಿಕೆಗಳಲ್ಲಿ ವಿಧ್ಯಾಭ್ಯಾಸದೊಂದಿಗೆ ತೊಡಗಿಸಿಕೊಂಡ ಈ ಚಿಕ್ಕ ಬಾಲಕಿಯನ್ನು ಸನ್ಮಾಸಿ ಗೌರವಿಸಲಾಯಿತು.
ವೇದಿಕೆಯಲ್ಲಿ ದಾವಣಗೆರೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷರಾದ ಬಿ.ವಾಮದೇವಪ್ಪ, ಸಂಸ್ಥೆಯ ಅಧ್ಯಕ್ಷರಾದ ವಾಸುದೇವ ಲಕ್ಷ್ಮ ಣ್ ರಾಯ್ಕರ್, ಕಲಾಕುಂಚ ಕೇರಳ ಗಡಿನಾಡ ಶಾಖೆಯ ಸಂಸ್ಥಾಪಕರಾದ ಜಯಲಕ್ಷ್ಮೀ ಶ್ರೀರಾಮ ಕಾರಂತ್, ಕಲಾಕುಂಚ ಗೌರವ ಅಧ್ಯಕ್ಷರಾದ ಕೆ.ಎಚ್.ಮಂಜುನಾಥ್, ಕಲಾಕುಂಚ ಮಹಿಳಾ ವಿಭಾಗದ ಸಂಸ್ಥಾಪಕರಾದ ಜ್ಯೋತಿ ಗಣೇಶ್‌ಶೆಣೈ, ಕಲಾಕುಂಚ ಮಹಿಳಾ ವಿಭಾಗದ ಅಧ್ಯಕ್ಷರಾದ ಹೇಮಾ ಶಾಂತಪ್ಪ ಪೂಜಾರಿ, ಕಲಾಕುಂಚ ಮಹಿಳಾ ವಿಭಾಗದ ಗೌರವ ಅಧ್ಯಕ್ಷರಾದ ವಸಂತಿ ಮಂಜುನಾಥ್, ಕಲಾಕುಂಚದ ಪ್ರಧಾನ ಕಾರ್ಯದರ್ಶಿ ಕೆ.ಸಿ.ಉಮೇಶ್, ಸಮಿತಿ ಸದಸ್ಯರಾದ ಶೈಲಾ ವಿನೋಧ್ ಶೈಲಾ ವಿಜಯಕುಮಾರ್ ಶೆಟ್ಟಿ, ಶಿಲ್ಪಾ ಉಮೇಶ್, ಅಪರ್ಣಾ ಪಾಣೂರು ರವರ ತಂದೆ ಶ್ಯಾಮಪ್ರಕಾಶ್, ಶ್ಯಾಮಲ ಮುಂತಾದವರು ಉಪಸ್ಥಿತರಿದ್ದರು.

