ಕಾರ್ಗಿಲ್ ವಿಜಯ ದಿವಸ್‌ ಆಚರಣೆ

0
8

ಶ್ರೀ ಮಹಾವೀರಕಾಲೇಜಿನ ಐಕ್ಯೂಎಸಿ ಹಾಗೂ ಎನ್‌ಸಿಸಿ ಘಟಕದ ವತಿಯಿಂದ ಕಾರ್ಗಿಲ್ ವಿಜಯ ದಿವಸ್‌ ಕಾರ್ಯಕ್ರಮವನ್ನುಆಯೋಜಿಸಲಾಯಿತು. ಭಾರತೀಯ ಸೇನೆಯ ಮಾಜಿ ಸೈನಿಕರಾದ ನವನಂದ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ಕಾರ್ಗಿಲ್‌ ಯುದ್ಧದ ಹಿನ್ನೆಲೆ, ಭಾರತೀಯ ಸೈನಿಕರ ಶೌರ್ಯ, ತ್ಯಾಗ ಹಾಗೂ ದೇಶ ರಕ್ಷಣೆಯಲ್ಲಿ ಅವರ ಪಾತ್ರದ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿ ವಿದ್ಯಾರ್ಥಿಗಳಲ್ಲಿ ದೇಶ ಪ್ರೇಮ, ಶಿಸ್ತು, ಆತ್ಮವಿಶ್ವಾಸ ಹಾಗೂ ರಾಷ್ಟ್ರ ದ ಕುರಿತು ಜವಾಬ್ದಾರಿಯ ಮನೋಭಾವವನ್ನು ಬೆಳೆಸಿಕೊಳ್ಳುವಂತೆ ಕರೆನೀಡಿದರು.

ಭಾರತೀಯ ಸೇನೆಯಲ್ಲಿ ತಮ್ಮ ಸೇವಾ ಅವಧಿಯ ಅನುಭವಗಳನ್ನು ಹಂಚಿಕೊಂಡ ಅವರು, ಸೈನಿಕರ ಜೀವನದಲ್ಲಿ ಶಿಸ್ತು, ಧೈರ್ಯ, ಆತ್ಮವಿಶ್ವಾಸ ಮತ್ತು ದೇಶ ಪ್ರೇಮದ ಮಹತ್ವವನ್ನು ವಿವರಿಸಿದರು.ಅಲ್ಲದೆ, ಎನ್‌ಸಿಸಿ ಹಾಗೂ ಎನ್‌ಎಸ್‌ಎಸ್ ಚಟುವಟಿಕೆಗಳ ಮೂಲಕ ವಿದ್ಯಾರ್ಥಿಗಳು ದೇಶಸೇವೆ ಹಾಗೂ ಸಮಾಜಸೇವೆಯ ಮನೋಭಾವವನ್ನು ಬೆಳೆಸಿಕೊಳ್ಳಬಹುದುಎಂದರು.

ಕಾರ್ಗಿಲ್‌ ಯುದ್ಧದಲ್ಲಿ ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ವೀರಯೋಧರನ್ನು ಸ್ಮರಿಸಿ ಅವರಿಗೆ ಪುಷ್ಪಾರ್ಚನೆಯ ಮೂಲಕ ಗೌರವ ಸಲ್ಲಿಸಲಾಯಿತು. ವಿದ್ಯಾರ್ಥಿಗಳಲ್ಲಿ ದೇಶಭಕ್ತಿ, ರಾಷ್ಟ್ರ ಪ್ರೇಮ, ಶಿಸ್ತು ಹಾಗೂ ಸೇವಾ ಮನೋಭಾವವನ್ನು ಹೆಚ್ಚಿಸುವಲ್ಲಿ ಈ ಕಾರ್ಯಕ್ರಮದ ಪಾತ್ರ ಮಹತ್ವದ್ದಾಗಿತ್ತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಮೇಜರ್‌ಡಾ.ರಾಧಾಕೃಷ್ಣ ವಹಿಸಿದ್ದರು. ಪದವಿಪೂರ್ವಕಾಲೇಜಿನ ಪ್ರಾಂಶುಪಾಲೆ ಹಾಗೂ ಕಾಲೇಜಿನ ಎನ್‌ಸಿಸಿ ಅಧಿಕಾರಿ ಲೆಫ್ಟಿನೆಂಟ್ ವಿಜಯಲಕ್ಷ್ಮೀ ಉಪಸ್ಥಿತರಿದ್ದರು. ಸಿಪಿಎಲ್ ಸುಹಾನ್ ಸ್ವಾಗತಿಸಿ, ಸಿಪಿಎಲ್ ಹರ್ಷಿತ್‌ಅತಿಥಿ ಪರಿಚಯ ಮಾಡಿದರು.ಜೆಯುಒ ರಕ್ಷಿತಾ ಕಾರ್ಯಕ್ರಮ ನಿರೂಪಿಸಿದರು.