ಭಾರಿ ಮಳೆ ಸಾಧ್ಯತೆ : ಆ. 1ರಂದು ದಕ್ಷಿಣ ಕನ್ನಡ ಜಿಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

0
1

ಮಂಗಳೂರು: ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆ ಪ್ರಕಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಗಸ್ಟ್‌ 1 ರಂದು ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ. ಹಾಗಾಗಿ ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರಗಳಿಗೆ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢಶಾಲೆ ಹಾಗೂ ವಸತಿಶಾಲೆಗಳಿಗೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ ಆದೇಶ ಹೊರಡಿಸಿದ್ದಾರೆ.