ಕಾಪು: ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ಶ್ರೀ ದುರ್ಗಾ ನಮಸ್ಕಾರ ಪೂಜೆ ಕಾರ್ಯಕ್ರಮವು ಆಗಸ್ಟ್ 14ರಂದು ಸಂಜೆ 5 ಗಂಟೆಗೆ ಭಕ್ತಿಭಾವದಿಂದ ನಡೆಯಲಿದೆ.
ಕಾರ್ಯಕ್ರಮವು ಸಂಜೆ 5 ಗಂಟೆಗೆ ಪೂಜಾ ವಿಧಿವಿಧಾನಗಳೊಂದಿಗೆ ಆರಂಭಗೊಳ್ಳಲಿದ್ದು, ಸಂಜೆ 7 ಗಂಟೆಗೆ ಮಹಾ ಮಂಗಳಾರತಿ ನೆರವೇರಲಿದೆ.
ಈ ಪುಣ್ಯಮಯ ಧಾರ್ಮಿಕ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಿ ದೇವರ ಕೃಪೆಗೆ ಪಾತ್ರರಾಗುವಂತೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ, ಅರ್ಚಕ ವರ್ಗ ಹಾಗೂ ಸಿಬ್ಬಂದಿ ವರ್ಗ ಪ್ರಕಟಣೆಯಲ್ಲಿ ವಿನಂತಿಸಿಕೊಂಡಿದ್ದಾರೆ.

