ಮಂಗಳೂರು: ನಿರಂತರ ಮಳೆ ಹಾಗೂ ಹವಾಮಾನ ಇಲಾಖೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆ.3ರಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಮಳೆ ಹಿನ್ನೆಲೆ ತಾಲೂಕುವಾರು ರಜೆ ಘೋಷಿಸಲಾಗಿದೆ. ಮೂಡುಬಿದಿರೆ ತಾಲೂಕಿನ ಅಂಗನವಾಡಿ, ಪ್ರೌಡಶಾಲೆ, ಪ್ರಾಥಮಿಕ ಶಾಲೆಗೆ ರಜೆ ಗೋಷಿಸಲಾಗಿದೆ.
ಪುತ್ತೂರು ತಾಲೂಕಿನಂತೆಲ್ಲ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಆಗಸ್ಟ್ 3, 2026ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷ ದರ್ಶನ್ ಎಚ್.ವಿ. ಆದೇಶ ಹೊರಡಿಸಿದ್ದಾರೆ.
ಅದೇ ರೀತಿ ಪಿಯು ಕಾಲೇಜುಗಳು, ಐಟಿಐ ಹಾಗೂ ಡಿಪ್ಲೊಮಾ ಕಾಲೇಜುಗಳಿಗೂ ರಜೆ ಅನ್ವಯವಾಗಲಿದೆ. ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ. ಮಳೆಯ ಹಿನ್ನೆಲೆಯಲ್ಲಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ನದಿ, ಸಮುದ್ರ, ಜಲಪಾತ ಹಾಗೂ ಅಪಾಯಕಾರಿ ಪ್ರದೇಶಗಳಿಗೆ ತೆರಳದಂತೆ ಜಿಲ್ಲಾಡಳಿತ ಸೂಚಿಸಿದೆ.

