ಮರದಿಂದ ಬಿದ್ದು ಗಾಯಗೊಂಡ ಕಾರ್ಮಿಕನ ಚಿಕಿತ್ಸೆಗೆ ಕರುನಾಡು ಚಾರಿಟೇಬಲ್ ಟ್ರಸ್ಟ್‌ನಿಂದ ಆರ್ಥಿಕ ನೆರವು

0
24

ಬೆಳ್ತಂಗಡಿ : ಸಾಮಾಜಿಕ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಕರುನಾಡು ಚಾರಿಟೇಬಲ್ ಟ್ರಸ್ಟ್ (ರಿ.), ಕರ್ನಾಟಕ ತನ್ನ 2026ರ ಜುಲೈ ತಿಂಗಳ 14ನೇ ಮಾಸಿಕ ಸೇವಾ ಯೋಜನೆ ಅಡಿಯಲ್ಲಿ ಮತ್ತೊಂದು ಮಾನವೀಯ ಕಾರ್ಯ ನೆರವೇರಿಸಿದೆ.

ಬೆಳ್ತಂಗಡಿ ತಾಲೂಕಿನ ಬಜಿರೆ ಗ್ರಾಮದ ಕೇದಗೆ ಕೋಡಿ ಮನೆ ನಿವಾಸಿ ರಾಜೇಶ್ ಅವರು ಕೂಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ಮರದಿಂದ ಬಿದ್ದು ಗಂಭೀರವಾಗಿ ಗಾಯಗೊಂಡು ಬೆನ್ನುಮೂಳೆ ಮುರಿತಕ್ಕೊಳಗಾಗಿದ್ದಾರೆ. ಪ್ರಸ್ತುತ ಅವರು ಮಂಗಳೂರಿನ K.M.C. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಮುಂದಿನ ಚಿಕಿತ್ಸೆಗೆ ಆರ್ಥಿಕ ನೆರವಿನ ಅಗತ್ಯವಿರುವ ಹಿನ್ನೆಲೆಯಲ್ಲಿ ಟ್ರಸ್ಟ್ ವತಿಯಿಂದ ₹10,000 ಧನಸಹಾಯ ನೀಡಲಾಯಿತು.

ಈ ಧನಸಹಾಯವನ್ನು ಆಗಸ್ಟ್‌ 2, 2026 (ಭಾನುವಾರ) ಶ್ರೀ ರಕ್ತೇಶ್ವರಿ ದೇವಿ ಸನ್ನಿಧಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಕರುನಾಡು ಚಾರಿಟೇಬಲ್ ಟ್ರಸ್ಟ್‌ನ ಎಲ್ಲಾ ಸೇವಾ ಮಾಣಿಕ್ಯರು ಉಪಸ್ಥಿತರಿದ್ದು, ರಾಜೇಶ್ ಅವರ ಶೀಘ್ರ ಗುಣಮುಖತೆಗಾಗಿ ಹಾರೈಸಿದರು.

ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದ ಎಲ್ಲ ದಾನಿಗಳು, ಸೇವಾ ಮಾಣಿಕ್ಯರು ಹಾಗೂ ಸಹೃದಯರಿಗೆ ಟ್ರಸ್ಟ್ ಆಡಳಿತ ಮಂಡಳಿ ಕೃತಜ್ಞತೆ ಸಲ್ಲಿಸಿದೆ.