ಕಂಡೊಡೊಂಜಿ ದಿನ ಕಾರ್ಯಕ್ರಮ ಯಶಸ್ವಿ

0
15

ಎರ್ಮಾಳು : ಶ್ರೀ ಕುದ್ರೋಟ್ಟು ಬ್ರಹ್ಮ ಬೈದರ್ಕಳ ಗರಡಿ ಎರ್ಮಾಳು, ಬಡಾ ಕೋಟಿ-ಚೆನ್ನಯ ಯುವ ಬಿಲ್ಲವ ಸಂಘಟನೆ ಹಾಗೂ ಬೈದಶ್ರೀ ಮಹಿಳಾ ಮಂಡಳಿ ಇವರ ನೇತೃತ್ವದಲ್ಲಿ ಆಗಸ್ಟ್‌ 2ರಂದು ಕಂಡೊಡೊಂಜಿ ದಿನ ಕಾರ್ಯಕ್ರಮ ಸಂಭ್ರಮದಿಂದ ನಡೆಯಿತು.

ತೆಂಕ ಬಡಾ ಜೋಡುಕರೆ ಕಂಬಳ ಗದ್ದೆ, ಎರ್ಮಾಳಿನಲ್ಲಿ ನಡೆದ ಕಾರ್ಯಕ್ರಮವನ್ನು ಭೋಜರಾಜ್ ವಾಮಂಜೂರು ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ತುಳುನಾಡಿನ ಸಂಸ್ಕೃತಿ, ಸಂಪ್ರದಾಯ ಮತ್ತು ಜನಪದ ಆಚರಣೆಗಳನ್ನು ಮುಂದಿನ ಪೀಳಿಗೆಗೆ ಪರಿಚಯಿಸುವಲ್ಲಿ ಇಂತಹ ಕಾರ್ಯಕ್ರಮಗಳು ಮಹತ್ವದ ಪಾತ್ರವಹಿಸುತ್ತವೆ ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದ ಅಂಗವಾಗಿ ವೇದಿಕೆಯಲ್ಲಿ ಭೋಜರಾಜ್ ವಾಮಂಜೂರು ಹಾಗೂ ಅವರ ಪತ್ನಿಯನ್ನು ಸಂಘಟನೆಯ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು.

ಕಂಡೊಡೊಂಜಿ ದಿನದ ಅಂಗವಾಗಿ ವಿವಿಧ ಸಾಂಸ್ಕೃತಿಕ ಹಾಗೂ ಸಾಂಪ್ರದಾಯಿಕ ಕಾರ್ಯಕ್ರಮಗಳು ಜರುಗಿದ್ದು, ಗ್ರಾಮಸ್ಥರು, ಸಂಘಟನೆಯ ಪದಾಧಿಕಾರಿಗಳು, ಮಹಿಳಾ ಮಂಡಳಿಯ ಸದಸ್ಯರು ಹಾಗೂ ಅಪಾರ ಸಂಖ್ಯೆಯ ಸಾರ್ವಜನಿಕರು ಭಾಗವಹಿಸಿ ಕಾರ್ಯಕ್ರಮಕ್ಕೆ ಮೆರುಗು ತಂದರು.