ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಲಕ್ಷ್ಮೀ ಮಂಜುನಾಥ್ ಕೊಳ ನಿಧನಕ್ಕೆ ಜಿಲ್ಲಾ ಬಿಜೆಪಿ ತೀವ್ರ ಸಂತಾಪ

0
45

ಬಿಜೆಪಿ ಉಡುಪಿ ಜಿಲ್ಲಾ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಹಾಗೂ ಉಡುಪಿ ನಗರಸಭೆಯ ಮಾಜಿ ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್ ಮಲ್ಪೆ ಕೊಳ ಇವರ ಅಕಾಲಿಕ ನಿಧನಕ್ಕೆ ಉಡುಪಿ ಜಿಲ್ಲಾ ಬಿಜೆಪಿ ತೀವ್ರ ಸಂತಾಪ ವ್ಯಕ್ತಪಡಿಸಿದೆ.

ಅನೇಕ ಧಾರ್ಮಿಕ, ಸಾಮಾಜಿಕ ಸಂಘ-ಸಂಸ್ಥೆಗಳಲ್ಲಿ ಸಕ್ರಿಯ ಭಾಗವಹಿಸುವಿಕೆಯ ಜೊತೆಗೆ ಪಕ್ಷದ ಕ್ರಿಯಾಶೀಲ ಕಾರ್ಯಕರ್ತೆಯಾಗಿ ಮಹಿಳಾ ಮೋರ್ಚಾದ ಸಂಘಟನಾತ್ಮಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಲಕ್ಷ್ಮೀ ಮಂಜುನಾಥ್ ಕೊಳ ಅವರ ಅಗಲುವಿಕೆ ಪಕ್ಷ ಹಾಗೂ ಸಮಾಜಕ್ಕೆ ತುಂಬಲಾರದ ನಷ್ಟವೆನಿಸಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ತಿಳಿಸಿದ್ದಾರೆ.

ಅಗಲಿದ ಅವರ ದಿವ್ಯಾತ್ಮಕ್ಕೆ ಭಗವಂತನು ಚಿರಶಾಂತಿಯನ್ನು ಕರುಣಿಸಲಿ ಹಾಗೂ ಅವರ ಪತಿ ಬಿಜೆಪಿ ಮುಖಂಡ ಮಂಜುನಾಥ್ ಸಾಲ್ಯಾನ್ ಕೊಳ ಹಾಗೂ ಪುತ್ರರು, ಕುಟುಂಬಕ್ಕೆ ಅವರ ಅಗಲುವಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುವುದಾಗಿ ಕುತ್ಯಾರು ನವೀನ್ ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಲಕ್ಷ್ಮೀ ಮಂಜುನಾಥ್ ಕೊಳ ನಿಧನಕ್ಕೆ ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಯಶ್ಪಾಲ್ ಎ. ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ವಿ.ಸುನಿಲ್ ಕುಮಾರ್, ಕಿರಣ್ ಕುಮಾರ್ ಕೊಡ್ಗಿ, ಗುರುರಾಜ್ ಗಂಟಿಹೊಳೆ, ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೊಟ್ಯಾಡಿ ಸಹಿತ ಪಕ್ಷದ ಮುಖಂಡರು ತೀವ್ರ ಸಂತಾಪ ಸೂಚಿಸಿದ್ದಾರೆ.