ಯುವವಾಹಿನಿ ಮೂಡುಬಿದಿರೆ ಘಟಕದ ವತಿಯಿಂದ ಶ್ರೀ ನಾರಾಯಣ ಗುರುಗಳ ಜೀವನ ಸಂದೇಶ ಗೋಷ್ಠಿ ಅರಿವು 2026 ಕಾರ್ಯಕ್ರಮ ಅಮೃತ ಸಭಾಭವನದಲ್ಲಿ ಅಗಸ್ಟ್ 2ರಂದು ನಡೆಯಿತು. ಶಾಸಕ ಉಮಾನಾಥ ಕೋಟ್ಯಾನ್ ಉದ್ಘಾಟನೆಯನ್ನು ನೆರವೇರಿಸಿ ವಿದ್ಯಾರ್ಥಿ ವೇತನದ ಮೂಲಕ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುತ್ತಿರುವುದು, ಉತ್ತಮ ಕೆಲಸ ಮಾಡಿದವರನ್ನು ಸನ್ಮಾನಿಸುವುದು ಪ್ರಶಂಸನೀಯ ಕಾರ್ಯ. ಸಮಾಜದ ಉನ್ನತಿಗೆ ಶ್ರಮಿಸುತ್ತಿರುವ ಎಲ್ಲರಿಗೂ ಶುಭ ಹಾರೈಸಿದರು.
ಘಟಕದ ಅಧ್ಯಕ್ಷ ಗಿರೀಶ್ ಕೋಟ್ಯಾನ್ ಮಾರೂರು ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷ ಚಂದ್ರಹಾಸ್ ಸನಿಲ್, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಜಿನೇಂದ್ರ ಕೋಟ್ಯಾನ್, ಕೇಂದ್ರ ಸಮಿತಿಯ ಸತೀಶ್, ಶುಭಕರ ಪೂಜಾರಿ, ಸೇವಾ ಸಂಘದ ಅಧ್ಯಕ್ಷ ನವೀನ್ ಚಂದ್ರ ಕರ್ಕೇರ, ಪುಂಜಾಲಕಟ್ಟೆ ವಸತಿ ಶಾಲೆಯ ಪ್ರಾಂಶುಪಾಲ ಸಂತೋಷ್ ಸನಿಲ್, ನಿರ್ದೇಶಕರುಗಳಾದ ಯೋಗಿತಾ, ದಯಾನಂದ ಮಾಸ್ತಿ ಕಟ್ಟೆ ಹಾಜರಿದ್ದರು.
ಯುವ ಸ್ಪಂದನ ಸೇವಾ ಯೋಜನೆಯ ಅಧ್ಯಕ್ಷ ನವಾನಂದ ಸ್ವಾಗತಿಸಿದರು. ಮಾರೂರು ಶಂಕರ್ ಕೋಟ್ಯಾನ್, ಮಾರ್ನಾಡು ಪೂರ್ಣಿಮಾ ಕೋಟ್ಯಾನ್ ಕಾರ್ಯಕ್ರಮ ನಿರ್ವಹಿಸಿದರು. ಕೋಶಾಧಿಕಾರಿ ಜಯಶೀಲಾ ಪೂಜಾರಿ, ಕಾರ್ಯದರ್ಶಿ ಮೇಘನಾ ಕಾರ್ಯಕ್ರಮ ಸಂಘಟಿಸಿದ್ದರು.

