ಉಡುಪಿ : ವಾಮನ ವಿಠಲ ಟ್ರಸ್ಟ್ ಹಾಗೂ ಹುಬ್ಬಳ್ಳಿಯ ಜಯಪ್ರಿಯ ಮೆಡಿಕಲ್ ಫೌಂಡೇಶನ್ ಮತ್ತು ಬೆಂಗಳೂರಿನ ಹಯಗ್ರೀವ ಆಸ್ಪತ್ರೆಯ ಸಹಯೋಗದೊಂದಿಗೆ ರಾಜಾಂಗಣದಲ್ಲಿ ಆಯೋಜಿಸಲಾಗಿದ್ದ ಉಚಿತ ‘ಸಮಗ್ರ ಆರೋಗ್ಯ ಮತ್ತು ನೇತ್ರ ತಪಾಸಣಾ ಶಿಬಿರ’ವು ಪರ್ಯಾಯ ಪೀಠಾಧೀಶರಾದ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಉದ್ಘಾಟಿಸಿದರು.
ಈ ಶಿಬಿರದಲ್ಲಿ ನೂರಾರು ಜನರು ತಜ್ಞ ವೈದ್ಯರಿಂದ ಉಚಿತ ಆರೋಗ್ಯ ಮತ್ತು ಕಣ್ಣಿನ ತಪಾಸಣೆ, ಉಚಿತ ಕನ್ನಡಕ ಹಾಗೂ ಮಾರ್ಗದರ್ಶನವನ್ನು ಪಡೆದುಕೊಂಡರು.

