ವಿದ್ಯಾರ್ಥಿ ಪ್ರೋತ್ಸಾಹಧನ ವಿತರಣೆ ಸಮಾರಂಭದಲ್ಲಿ ಅಖಿಲ ಕರ್ನಾಟಕ ಗಾಣಿಗರ ಸಂಘದ ಅಧ್ಯಕ್ಷರಿಗೆ ಸಂಸದ ಬ್ರಿಜೇಶ್ ಚೌಟರಿಂದ ಸನ್ಮಾನ

0
4

ಬಂಟ್ವಾಳ ತಾಲ್ಲೂಕಿನ ಗಾಣಿಗರ ಸೇವಾ ಸಂಘದ ವತಿಯಿಂದ ಪಾಣೆಮಂಗಳೂರಿನಲ್ಲಿ ಭಾನುವಾರ ಏರ್ಪಡಿಸಿದ್ದ ವಿದ್ಯಾರ್ಥಿ ಪ್ರೋತ್ಸಾಹಧನ ವಿತರಣೆ ಮತ್ತು ನವೀಕೃತ ಸುಮಂಗಲಾ ಕಲ್ಯಾಣ ಮಂಟಪ ಲೋಕಾರ್ಪಣೆಯಲ್ಲಿ ಅಖಿಲ ಕರ್ನಾಟಕ ಗಾಣಿಗರ ಸಂಘದ ಅಧ್ಯಕ್ಷ ರಾಜಶೇಖರ್ ಗಾಣಿಗ ಇವರನ್ನು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಸನ್ಮಾನಿಸಿದರು.

ಗಾಣಿಗ ಅಭಿವೃದ್ಧಿ ನಿಗಮ ಅಧ್ಯಕ್ಷ ಅನಂತ್ ಮೈಸೂರು, ಮುಂಬೈ ಸಂಘದ ಅಧ್ಯಕ್ಷ ಶ್ರೀನಿವಾಸ ಪಿ.ಸಪಲ್ಯ, ವಿಧಾನಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೊಟ್ಯಾಡಿ ಮತ್ತಿತರರು ಇದ್ದರು.