ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನಾದ್ಯಂತ ಸುರಿದ ಧಾರಾಕಾರ ಮಳೆಯಿಂದ ಹಾನಿಗೊಳಗಾದ ಮುಂಡಾಜೆ, ಕಲ್ಮಂಜ ಹಾಗೂ ಧರ್ಮಸ್ಥಳ ಗ್ರಾಮಗಳ ವಿವಿಧ ಪ್ರದೇಶಗಳಿಗೆ ಬೆಳ್ತಂಗಡಿ ಕ್ಷೇತ್ರದ ಶಾಸಕ ಹರೀಶ್ ಪೂಂಜ ಭೇಟಿ ನೀಡಿ ಹಾನಿಯ ಪ್ರಮಾಣವನ್ನು ಪರಿಶೀಲಿಸಿದರು.
ಮಳೆ ಹಾಗೂ ಭೂಕುಸಿತದಿಂದ ಹಾನಿಗೊಳಗಾದ ಪ್ರದೇಶಗಳಲ್ಲಿ ಸ್ಥಳೀಯರೊಂದಿಗೆ ಮಾತುಕತೆ ನಡೆಸಿದ ಶಾಸಕರು, ಸಮಸ್ಯೆಗಳನ್ನು ಆಲಿಸಿ ಅಗತ್ಯ ಪರಿಹಾರ ಕ್ರಮಗಳನ್ನು ತ್ವರಿತವಾಗಿ ಕೈಗೊಳ್ಳುವಂತೆ ಸಂಬಂಧಿತ ಅಧಿಕಾರಿಗಳಿಗೆ ಸೂಚನೆ ನೀಡಿದರು. ಸಾರ್ವಜನಿಕರಿಗೆ ಅಗತ್ಯ ನೆರವು ಹಾಗೂ ಮೂಲಸೌಕರ್ಯಗಳನ್ನು ಶೀಘ್ರ ಪುನಃಸ್ಥಾಪಿಸಲು ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

ಪರಿಶೀಲನೆ ವೇಳೆ ಬಿಜೆಪಿ ಶಕ್ತಿಕೇಂದ್ರದ ಪ್ರಮುಖರು, ಸಿಎ ಬ್ಯಾಂಕ್ ಅಧ್ಯಕ್ಷರು, ಸ್ಥಳೀಯ ಮುಖಂಡರು, ಮಾಜಿ ಜನಪ್ರತಿನಿಧಿಗಳು ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದು, ಹಾನಿಗೊಳಗಾದ ಪ್ರದೇಶಗಳ ಸ್ಥಿತಿಗತಿಗಳ ಬಗ್ಗೆ ಮಾಹಿತಿ ನೀಡಿದರು.
ಮಳೆ ಹಾನಿಗೊಳಗಾದ ಕುಟುಂಬಗಳಿಗೆ ಸರ್ಕಾರದ ನಿಯಮಾನುಸಾರ ಪರಿಹಾರ ದೊರಕಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಶಾಸಕ ಹರೀಶ್ ಪೂಂಜ ತಿಳಿಸಿದ್ದಾರೆ.

