ಅನುಮಾನಾಸ್ಪದ ಕಾರು ಪತ್ತೆ

0
29

ಉಡುಪಿ : ಪೊಲೀಸರು ಗಸ್ತು ಕರ್ತವ್ಯದಲ್ಲಿದ್ದ ವೇಳೆ ಬಲಾಯಿಪಾದೆ ಬಳಿ ಹಲವು ದಿನಗಳಿಂದ ಅನುಮಾನಾಸ್ಪದವಾಗಿ ನಿಂತಿದ್ದ ಮಾರುತಿ ಕಾರನ್ನು ಪತ್ತೆಹಚ್ಚಿದ್ದಾರೆ.
ದಾಖಲೆ ಪರಿಶೀಲನೆ ನಡೆಸಿದ ವೇಳೆ ಈ ವಾಹನವು ಹುಬ್ಬಳ್ಳಿ-ಧಾರವಾಡ ಕಮಿಷನರೇಟ್​ ವ್ಯಾಪ್ತಿಯ ವಿದ್ಯಾನಗರ ಪೊಲೀಸ್​ ಠಾಣೆಯಲ್ಲಿ ವಾಹನ ಕಳ್ಳತನ ಪ್ರಕರಣಕ್ಕೆ ಸೇರಿದ್ದು, ಕಾರನ್ನು ವಶಕ್ಕೆ ಪಡೆದು, ಸಂಬಂಧಪಟ್ಟ ಠಾಣೆಗೆ ಮಾಹಿತಿ ನೀಡಲಾಗಿದೆ. ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಈ ಕಾರ್ಯಾಚರಣೆಯಲ್ಲಿ ಟ್ರಾಫಿಕ್​ ಎಸ್​ ಐ ಮಹೇಶ್​ ಹಾಗೂ ಸಿಬ್ಬಂದಿ ಭಾಗವಹಿಸಿದ್ದರು.