
ಬಿಲ್ಲವ ಸೇವಾ ಸಂಘ(ರಿ.) ಅಂಬಲಪಾಡಿ ಇದರ ಆಶ್ರಯದಲ್ಲಿ ಸಂಘದ ಮಹಿಳಾ ಘಟಕದ ವತಿಯಿಂದ ಆಟಿಡೊಂಜಿ ಕೂಟ ಕಾರ್ಯಕ್ರಮವು ಸಂಘದ ಶ್ರೀ ನಾರಾಯಣ ಗುರು ಸಮುದಾಯ ಭವನದಲ್ಲಿ ನಡೆಯಿತು.
ಸಂಘದ ಅಧ್ಯಕ್ಷ ಶಿವದಾಸ್ ಪಿ. ಅಧ್ಯಕ್ಷತೆ ವಹಿಸಿ, ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು.
ಮುಖ್ಯ ಅತಿಥಿಗಳಾದ ಸಂಘದ ನಿಕಟಪೂರ್ವ ಅಧ್ಯಕ್ಷ ಶಿವಕುಮಾರ್ ಅಂಬಲಪಾಡಿ ಮತ್ತು ಮಹಿಳಾ ಘಟಕದ ಗೌರವ ಸಂಚಾಲಕಿ ವಿಜಯಾ ಜಿ. ಬಂಗೇರ ಮಾತನಾಡಿ, ತುಳುನಾಡಿನ ಆಚಾರ ವಿಚಾರ, ಜೀವನ ಪದ್ಧತಿ ಹಾಗೂ ಆಷಾಢ ಮಾಸದ ವೈಶಿಷ್ಟ್ಯಗಳು ಮತ್ತು ಆಹಾರ ಪದ್ಧತಿಯ ಕುರಿತು ವಿಸ್ತ್ರತ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ(ರಿ.) ಬೆಂಗಳೂರು ಇವರ ಬ್ರಹ್ಮಾವರ ಶಾಖೆಯಿಂದ ‘ತಾಲೂಕು ಅನುಪಮ ಸೇವಾ ಪುರಸ್ಕಾರ-2026’ ಪ್ರಶಸ್ತಿ ಪಡೆದ ಚೇರ್ಕಾಡಿ ಸರಕಾರಿ ಹಿ.ಪ್ರಾ. ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ವಿಜಯಲಕ್ಷ್ಮೀ ಕೃಷ್ಣ ಕೋಟ್ಯಾನ್ ಅಂಬಲಪಾಡಿ ಅವರನ್ನು ಸಂಘದ ಮತ್ತು ಮಹಿಳಾ ಘಟಕದ ವತಿಯಿಂದ ಸನ್ಮಾನಿಸಲಾಯಿತು.
ಆಟಿ ತಿಂಗಳ ವೈವಿಧ್ಯಮಯ ಖಾದ್ಯಗಳ ಪ್ರಾತ್ಯಕ್ಷಿಕೆ ನಡೆಯಿತು.
ಮಹಿಳಾ ಘಟಕದ ಕಾರ್ಯದರ್ಶಿ ವಾಣಿಶ್ರೀ ಅರುಣ್ ವಿವಿಧ ಖಾದ್ಯಗಳನ್ನು ತಯಾರಿಸಿದ ಮಹಿಳೆಯರ ವಿವರವನ್ನು ವಾಚಿಸಿದರು. ಜತೆ ಕಾರ್ಯದರ್ಶಿ ಸಂಚಲ ಶಶಿಕಾಂತ್ ಸನ್ಮಾನಿತರನ್ನು ಪರಿಚಯಿಸಿದರು.
ಈ ಸಂದರ್ಭದಲ್ಲಿ ಸಂಘದ ಗೌರವಾಧ್ಯಕ್ಷ ಗೋಪಾಲ್ ಸಿ. ಬಂಗೇರ, ಉಪಾಧ್ಯಕ್ಷ ಎ.ಮುದ್ದಣ್ಣ ಪೂಜಾರಿ, ಪ್ರಧಾನ ಕಾರ್ಯದರ್ಶಿ ರಾಜೇಶ್, ಕೋಶಾಧಿಕಾರಿ ದಯಾನಂದ ಎ., ಜತೆ ಕಾರ್ಯದರ್ಶಿ ಮಹೇಂದ್ರ ಕೋಟ್ಯಾನ್, ವಿನಯ್ ಕುಮಾರ್ ಸಹಿತ ಮಹಿಳಾ ಘಟಕದ ಪದಾಧಿಕಾರಿಗಳು, ಸಮಿತಿ ಸದಸ್ಯರು ಮತ್ತು ಸಂಘದ ಸದಸ್ಯರು ಉಪಸ್ಥಿತರಿದ್ದರು.
ಮಹಿಳಾ ಘಟಕದ ಸಂಚಾಲಕಿ ಗೋಧಾವರಿ ಎಮ್. ಸುವರ್ಣ ಸ್ವಾಗತಿಸಿದರು. ಸಹ ಸಂಚಾಲಕಿ ವಿಜಯಲಕ್ಷ್ಮೀ ಕೃಷ್ಣ ಕೋಟ್ಯಾನ್ ವಂದಿಸಿದರು. ಸಂಘಟನಾ ಕಾರ್ಯದರ್ಶಿ ಪ್ರಭಾ ದಯಾನಂದ ಕಾರ್ಯಕ್ರಮ ನಿರೂಪಿಸಿದರು.

