ಮೂಡುಬಿದಿರೆ : ವಿಶ್ವ ಹಿಂದು ಪರಿಷತ್ ಹಾಗೂ ಬಜರಂಗದಳ ಮೂಡುಬಿದಿರೆ ಪ್ರಖಂಡದ ವತಿಯಿಂದ ‘ಅಖಂಡ ಭಾರತ ಸಂಕಲ್ಪ ದಿನಾಚರಣೆ’ ಅಂಗವಾಗಿ ಆಗಸ್ಟ್ 14, 2026ರ ಶುಕ್ರವಾರ ಸಂಜೆ 6.30ಕ್ಕೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.
ಕಾರ್ಯಕ್ರಮದ ಅಂಗವಾಗಿ ಮೂಡುಬಿದಿರೆಯ ಸಾವಿರ ಕಂಬದ ಬಸದಿಯಿಂದ ಸಮಾಜ ಮಂದಿರದವರೆಗೆ ಪಂಜಿನ ಮೆರವಣಿಗೆ ನಡೆಯಲಿದ್ದು, ಬಳಿಕ ಸಮಾಜ ಮಂದಿರದಲ್ಲಿ ಸಭಾ ಕಾರ್ಯಕ್ರಮ ಜರುಗಲಿದೆ.
ಈ ಕಾರ್ಯಕ್ರಮದಲ್ಲಿ ಸಂಘಟನೆಯ ಪದಾಧಿಕಾರಿಗಳು, ಕಾರ್ಯಕರ್ತರು, ಸಾರ್ವಜನಿಕರು ಹಾಗೂ ದೇಶಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ವಿಶ್ವ ಹಿಂದು ಪರಿಷತ್ ಹಾಗೂ ಬಜರಂಗದಳ ಮೂಡುಬಿದಿರೆ ಪ್ರಖಂಡದ ವತಿಯಿಂದ ಪ್ರಕಟಣೆಯಲ್ಲಿ ಮನವಿ ಮಾಡಲಾಗಿದೆ.

