ಉಡುಪಿ ಜಿಲ್ಲಾ ತುಳುನಾಡ ರಕ್ಷಣಾ ವೇದಿಕೆ ವತಿಯಿಂದ ನಡೆಯುವ ‘ಆಟಿಡೊಂಜಿ ದಿನ’ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

0
30

ಉಡುಪಿ: ಕಳೆದ 17 ವರ್ಷಗಳಿಂದ ತುಳುನಾಡಿನ ಸಂಸ್ಕೃತಿ, ಸಂಪ್ರದಾಯ ಹಾಗೂ ಜನಪದ ಆಚರಣೆಗಳನ್ನು ಉಳಿಸಿ ಬೆಳೆಸುವ ಉದ್ದೇಶದಿಂದ ಕೆಲಸಮಾಡುತ್ತಿರುವ ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಘಟಕದ ವತಿಯಿಂದ ಉಡುಪಿ ಬ್ರಹ್ಮಗಿರಿಯಲ್ಲಿ ದಿನಾಂಕ 16-08-2026 ರಂದು ಆಯೋಜಿಸಲಾಗಿರುವ ‘ಆಟಿಡೊಂಜಿ ದಿನ’ ಕಾರ್ಯಕ್ರಮದ ಆಮಂತ್ರಣ ಪತ್ರವನ್ನು ಉಡುಪಿಯ ಶ್ರೀ ಶೀರೂರು ಮಠದ 31ನೇ ಪೀಠಾಧಿಪತಿಗಳಾದ ಪರಮಪೂಜ್ಯ ಶ್ರೀ ಶ್ರೀ ವೇದವರ್ಧನ ತೀರ್ಥ ಸ್ವಾಮೀಜಿಯವರು ಇಂದು ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಸ್ವಾಮೀಜಿಯವರು ತುಳುನಾಡಿನ ಸಂಸ್ಕೃತಿ ಮತ್ತು ಪರಂಪರೆಯನ್ನು ಉಳಿಸಿ ಬೆಳೆಸುವ ಕಾರ್ಯದಲ್ಲಿ ತುಳುನಾಡ ರಕ್ಷಣಾ ವೇದಿಕೆ ನಿರಂತರವಾಗಿ ತೊಡಗಿಸಿಕೊಂಡಿರುವುದು ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿ, ಕಾರ್ಯಕ್ರಮವು ಯಶಸ್ವಿಯಾಗಿ ನಡೆಯಲಿ ಎಂದು ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಸ್ವಾಮೀಜಿಯವರ ಪೂರ್ವಾಶ್ರಮದ ತಂದೆ ಶ್ರೀ ಉದಯ ಕುಮಾರ್ ಸರಳ್ತಾಯ ಅವರು ಉಪಸ್ಥಿತರಿದ್ದು, ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.

ಈ ಸಂದರ್ಭದಲ್ಲಿ ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಅಧ್ಯಕ್ಷ ಫ್ರಾಂಕಿ ಡಿಸೋಜ ಕೊಳಲಗಿರಿ, ಮಹಿಳಾ ಜಿಲ್ಲಾ ಅಧ್ಯಕ್ಷೆ ನಾಗಲಕ್ಷ್ಮಿ ಸುಬ್ರಮಣ್ಯ ನಗರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಂದ್ರ ಪೂಜಾರಿ, ಜಿಲ್ಲಾ ಉಪಾಧ್ಯಕ್ಷರಾದ ಉಮೇಶ್ ಶೆಟ್ಟಿ ಹಾಗೂ ಮನೋಜ್ (ಕೆ.ಜಿ. ರೋಡ್), ಜಿಲ್ಲಾ ಜೊತೆ ಕಾರ್ಯದರ್ಶಿ ಪ್ರೀತಂ ಡಿಕೋಸ್ಟ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಶಂಕರ್ ಉಡುಪಿ, ಕಾಪು ತಾಲೂಕು ಅಧ್ಯಕ್ಷ ನಿತಿನ್ ಕುಮಾರ್ ಶೆಟ್ಟಿ, ಬ್ರಹ್ಮಾವರ ತಾಲೂಕು ಅಧ್ಯಕ್ಷ ಶರತ್ ರಾಜ್ ಆರೂರು, ಶ್ರೀ ಸುಶಾಂತ್ ಬ್ರಹ್ಮಾವರ, ಎಸ್. ಬಿ. ಟ್ರೇಡರ್ಸ್, ಉಡುಪಿ
ಸದಸ್ಯರು, ಎಸ್. ಕೆ. ಸಿ. ಸಿ. ಐ & ಬಿ. ಸಿ. ಸಿ. ಐ, ಬೈರಂಪಳ್ಳಿ ಘಟಕದ ಅಧ್ಯಕ್ಷ ಕೃಷ್ಣಾನಂದ ನಾಯಕ್, ಜಿಲ್ಲಾ ಸಂಘಟನಾ ಜೊತೆ ಕಾರ್ಯದರ್ಶಿ ಕೃಷ್ಣ ಮಾರ್ಪಳ್ಳಿ ಸೇರಿದಂತೆ ಹಲವಾರು ಪದಾಧಿಕಾರಿಗಳು ಉಪಸ್ಥಿತರಿದ್ದರು.

ತುಳುನಾಡಿನ ವಿಶಿಷ್ಟ ಆಟಿ ತಿಂಗಳ ಆಚರಣೆಗಳನ್ನು ಜನಸಾಮಾನ್ಯರಿಗೆ ಪರಿಚಯಿಸುವ ಹಾಗೂ ಯುವ ಪೀಳಿಗೆಗೆ ಸಂಸ್ಕೃತಿಯ ಮಹತ್ವವನ್ನು ತಿಳಿಸುವ ಉದ್ದೇಶದಿಂದ ಆಯೋಜಿಸಲಾಗಿರುವ ‘ಆಟಿಡೊಂಜಿ ದಿನ’ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಸಂಘಟನೆಯ ಪದಾಧಿಕಾರಿಗಳು ಸಾರ್ವಜನಿಕರಲ್ಲಿ ಮನವಿ ಮಾಡಿದರು.